ಈ ಮೊದಲು ಟೀಂ ಇಂಡಿಯಾ ಆರಂಭಿಕ ಬ್ಯಾಟ್ಸ್'ಮನ್ ಶಿಖರ್ ಧವನ್ ಕೌಟುಂಬಿಕ ಕಾರಣಗಳಿಂದಾಗಿ ಮೊದಲ 3 ಪಂದ್ಯಗಳಿಂದ ಹೊರಗುಳಿದಿದ್ದಾರೆ.

ಚೆನ್ನೈ(ಸೆ.16): ಅಭ್ಯಾಸದ ವೇಳೆ ಎಡ ಮೊಣಕಾಲಿನ ಗಾಯಕ್ಕೆ ತುತ್ತಾದ ಸ್ಪಿನ್ನರ್ ಅಕ್ಷರ್ ಪಟೇಲ್ ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯ ಮೊದಲ ಮೂರು ಏಕದಿನ ಪಂದ್ಯಗಳಿಂದ ಹೊರಬಿದ್ದಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಪಟೇಲ್ ಅವರ ಬದಲಿಗೆ ಮತ್ತೋರ್ವ ಎಡಗೈ ಸ್ಪಿನ್ನರ್ ರವೀಂದ್ರ ಜಡೇಜಾಗೆ ತಂಡದಲ್ಲಿ ಸ್ಥಾನ ನೀಡಲಾಗಿದೆ.

ಅಕ್ಷರ್‌'ಗೆ ವಿಶ್ರಾಂತಿಯ ಅಗತ್ಯವಿದ್ದು, ವೈದ್ಯರು ಅವರತ್ತ ಗಮನ ಹರಿಸುತ್ತಿದ್ದಾರೆ ಎಂದು ಬಿಸಿಸಿಐ ಪ್ರಕಟಣೆ ತಿಳಿಸಿದೆ. ಶ್ರೀಲಂಕಾ ವಿರುದ್ಧ ಸೀಮಿತ ಓವರ್ ಸರಣಿ ಹಾಗೂ ಆಸ್ಟ್ರೇಲಿಯಾ ವಿರುದ್ಧ ಮೊದಲ 3 ಏಕದಿನಗಳಿಗೆ ಜಡೇಜಾಗೆ ವಿಶ್ರಾಂತಿ ನೀಡಲಾಗಿತ್ತು.

ಈ ಮೊದಲು ಟೀಂ ಇಂಡಿಯಾ ಆರಂಭಿಕ ಬ್ಯಾಟ್ಸ್'ಮನ್ ಶಿಖರ್ ಧವನ್ ಕೌಟುಂಬಿಕ ಕಾರಣಗಳಿಂದಾಗಿ ಮೊದಲ 3 ಪಂದ್ಯಗಳಿಂದ ಹೊರಗುಳಿದಿದ್ದಾರೆ.