ಕಳೆದೊಂದು ವರ್ಷದಿಂದ ಟೀಂ ಇಂಡಿಯಾದ ಮುಖ್ಯಕೋಚ್ ಆಗಿ ಕಾರ್ಯನಿರ್ವಹಿಸಿದ್ದ, ಅದರಲ್ಲೂ ಬೌಲಿಂಗ್ ವಿಭಾಗಕ್ಕೆ ಹೆಚ್ಚು ಒತ್ತು ನೀಡುತ್ತಿದ್ದ ಸ್ಪಿನ್'ದಿಗ್ಗಜ ಕನ್ನಡಿಗ ಅನಿಲ್ ಕುಂಬ್ಳೆ ಹೆಸರನ್ನು ಜಡೇಜಾ ಟ್ವೀಟ್'ನಲ್ಲಿ ಉಲ್ಲೇಖಿಸಿಲ್ಲ.

ಕೊಲಂಬೊ(ಆ.09): ಬಾಂಗ್ಲಾದೇಶ ಕ್ರಿಕೆಟಿಗ ಶಕೀಬ್ ಅಲ್ ಹಸನ್ ಅವರನ್ನು ಹಿಂದಿಕ್ಕಿ ಐಸಿಸಿ ಆಲ್ರೌಂಡ್ ವಿಭಾಗದಲ್ಲಿ ಅಗ್ರಸ್ಥಾನಕ್ಕೆ ಲಗ್ಗೆಯಿಟ್ಟ ರವೀಂದ್ರ ಜಡೇಜಾ ತಮ್ಮ ಯಶಸ್ಸಿನ ಗುಟ್ಟನ್ನು ಬಿಚ್ಚಿಟ್ಟಿದ್ದಾರೆ.

ಹೌದು, ಈಗಾಗಲೇ ಟೆಸ್ಟ್ ಕ್ರಿಕೆಟ್'ನ ಬೌಲಿಂಗ್ ವಿಭಾಗದಲ್ಲಿ ನಂ.1 ಸ್ಥಾನದಲ್ಲಿರುವ ಜಡೇಜಾ, ಮಂಗಳವಾರವಷ್ಟೇ ಐಸಿಸಿ ಬಿಡುಗಡೆ ಮಾಡಿದ ಆಲ್ರೌಂಡರ್'ಗಳ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೆ ದಾಪುಗಾಲಿಟ್ಟಿದ್ದಾರೆ. ಇದರ ಬೆನ್ನಲ್ಲೇ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಹಾಗೂ ಸಹ ಆಟಗಾರ ಅಜಿಂಕ್ಯ ರಹಾನೆ ಸೌರಾಷ್ಟ್ರದ ಎಡಗೈ ಆಟಗಾರನಿಗೆ ಅಭಿನಂದನೆ ಸಲ್ಲಿಸಿದ್ದರು.

ಇತ್ತೀಚಿನ ದಿನಗಳಲ್ಲಿ ಟೆಸ್ಟ್ ಕ್ರಿಕೆಟ್'ನಲ್ಲಿ ಸ್ಥಿರ ಪ್ರದರ್ಶನ ತೋರುತ್ತಿರುವ ಜಡೇಜಾ ತಮ್ಮ ಯಶಸ್ಸಿನ ಹಿಂದೆ ಟೀಂ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಹಾಗೂ ಹಾಲಿ ನಾಯಕ ವಿರಾಟ್ ಕೊಹ್ಲಿಯ ಪಾತ್ರ ಸಾಕಷ್ಟಿದೆ. ಈ ಇಬ್ಬರು ಆಟಗಾರರ ಸಹಕಾರದಿಂದಲೇ ಟೆಸ್ಟ್ ಕ್ರಿಕೆಟ್'ನ ಬೌಲಿಂಗ್ ಹಾಗೂ ಆಲ್ರೌಂಡ್ ವಿಭಾಗದಲ್ಲಿ ಅಗ್ರಸ್ಥಾನ ಕಾಯ್ದುಕೊಳ್ಳಲು ಸಾಧ್ಯವಾಗಿದೆ ಎಂದು ಜಡೇಜಾ ಟ್ವೀಟ್ ಮಾಡಿದ್ದಾರೆ.

Scroll to load tweet…

ಆದರೆ ಕಳೆದೊಂದು ವರ್ಷದಿಂದ ಟೀಂ ಇಂಡಿಯಾದ ಮುಖ್ಯಕೋಚ್ ಆಗಿ ಕಾರ್ಯನಿರ್ವಹಿಸಿದ್ದ, ಅದರಲ್ಲೂ ಬೌಲಿಂಗ್ ವಿಭಾಗಕ್ಕೆ ಹೆಚ್ಚು ಒತ್ತು ನೀಡುತ್ತಿದ್ದ ಸ್ಪಿನ್'ದಿಗ್ಗಜ ಕನ್ನಡಿಗ ಅನಿಲ್ ಕುಂಬ್ಳೆ ಹೆಸರನ್ನು ಜಡೇಜಾ ಮರೆತರಾ ಎಂಬ ಅನುಮಾನ ಕಾಡುತ್ತಿದೆ...