ಬೆಂಗಳೂರು(ಏ.30) ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ರಾಜಸ್ಥಾನ ರಾಯಲ್ಸ್ ನಡುವಿನ ಪಂದ್ಯಕ್ಕೆ ಮಳೆ ಅಡ್ಡಿಯಾಗಿದೆ. ಟಾಸ್ ಪ್ರಕ್ರಿಯೆ ಮುಗಿದ ಬೆನ್ನಲ್ಲೇ ಸುರಿದ ಬಾರಿ ಮಳೆಯಿಂದಾಗಿ ಪಂದ್ಯ ಆರಂಭವಾಗಲೇ ಇಲ್ಲ. ಇದೀಗ ಮಳೆ ನಿಂತಿದ್ದು, 10.40ಕ್ಕೆ ಅಂಪೈರ್ ಮೈದಾನ ಪರಿಶೀಲಿಸಲಿದ್ದಾರೆ. ಬಳಿಕ ಪಂದ್ಯ ಆರಂಭ ನಿರ್ಧರಿಸಲಿದ್ದಾರೆ. 

 

 

ಕನಿಷ್ಠ 5 ಓವರ್ ಪಂದ್ಯ ನಡೆಯುವ ಸಾಧ್ಯತೆ ಇದೆ.  ಈಗಾಗಲೇ ಟಾಸ್ ಗೆದ್ದಿರುವ ರಾಜಸ್ಥಾನ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಟಾಸ್ ಪ್ರಕ್ರಿಯೆ ಮುಗಿದ ಬೆನ್ನಲ್ಲೇ ಮಳೆ ಸುರಿಯಿತು. ಪಂದ್ಯಕ್ಕಾಗಿ ಕಾದು ಕುಳಿತ ಅಭಿಮಾನಿಗಳಿಗೆ ಕನಿಷ್ಠ 5 ಓವರ್ ಪಂದ್ಯ ವೀಕ್ಷಿಸುವ ಅವಕಾಶ ಸಿಗೋ ಸಾಧ್ಯತೆ ಇದೆ.