ನವದೆಹಲಿ(ಅ.03): ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಭಾರತ ಸೇನೆಯು ಇತ್ತೀಚೆಗೆ ನಡೆಸಿದ ಕಾರ್ಯಾಚರಣೆ ತರುವಾಯ ಪ್ರಧಾನಿ ನರೇಂದ್ರ ಮೋದಿ ನೀಡಿದ್ದ ಪಾಕಿಸ್ತಾನ ವಿರೋಧಿ ಹೇಳಿಕೆಗಳ ಬಗ್ಗೆ ಮಾಜಿ ಕ್ರಿಕೆಟಿಗ ಜಾವೇದ್ ಮಿಯಾಂದಾದ್ ಕೆಂಡಾಮಂಡಲವಾಗಿದ್ದಾರೆ.
ಅಲ್ಲಿನ ಖಾಸಗಿ ವಾಹಿನಿಯೊಂದಕ್ಕೆ ನೀಡಿರುವ ಸಂದರ್ಶನದಲ್ಲಿ ಮೋದಿ ಪಾಕಿಸ್ತಾನಕ್ಕೆ ನೀಡಿರುವ ಎಚ್ಚರಿಕೆ ಬಗ್ಗೆ ಕಿಡಿಕಾರಿರುವ ಅವರು, ‘‘ಪಾಕಿಸ್ತಾನವು ಇಂಥ ಗೊಡ್ಡು ಬೆದರಿಕೆಗಳಿಗೆ ಹೆದರುವುದಿಲ್ಲ. ಪಾಕಿಸ್ತಾನದ ಜನತೆಯಲ್ಲಿ ಒಗ್ಗಟ್ಟಿದೆ. ಸಾಂಘಿಕವಾಗಿ ಹೋರಾಡುವ ಛಾತಿಯಿದೆ. ಎರಡೂ ದೇಶಗಳ ನಡುವೆ ಯುದ್ಧ ನಡೆಯುವ ಸಂದರ್ಭ ಬಂದರೆ ನಾನು ಹುತಾತ್ಮನಾಗಲು ಸಿದ್ಧನಿದ್ದೇನೆ’’ ಎಂದು ಹೇಳಿದ್ದಾರೆ.
