ರಾಜ್ಯದ ರಾಜಧಾನಿಯಾದ ಬೆಂಗಳೂರನ್ನು ದೇಶದ ಕ್ರೀಡಾ ರಾಜಧಾನಿಯನ್ನಾಗಿ ರೂಪಿಸಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಪರಮೇಶ್ವರ್ ಹೇಳಿದ್ದಾರೆ.
ಬೆಂಗಳೂರು(ಜು.31]: ಕರ್ನಾಟಕದಲ್ಲಿ ಶೀಘ್ರದಲ್ಲೇ ಎಟಿಪಿ ಟೆನಿಸ್ ಟೂರ್ನಿ ನಡೆಯುವ ಸಾಧ್ಯತೆ ಇದೆ. ಸೋಮವಾರ ಖ್ಯಾತ ಟೆನಿಸಿಗ ರೋಹನ್ ಬೋಪಣ್ಣ ಅವರೊನ್ನೊಳಗೊಂಡ ರಾಜ್ಯ ಟೆನಿಸ್ ಸಂಸ್ಥೆಯ ನಿಯೋಗ ಕ್ರೀಡಾ ಸಚಿವ ಡಾ.ಜಿ.ಪರಮೇಶ್ವರ್ ಅವರನ್ನು ಭೇಟಿ ಮಾಡಿತು.
ಈ ವೇಳೆ ಮಾತನಾಡಿದ ಕ್ರೀಡಾ ಸಚಿವರು, ರಾಜ್ಯದ ರಾಜಧಾನಿಯಾದ ಬೆಂಗಳೂರನ್ನು ದೇಶದ ಕ್ರೀಡಾ ರಾಜಧಾನಿಯನ್ನಾಗಿ ರೂಪಿಸಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಪರಮೇಶ್ವರ್ ಹೇಳಿದ್ದಾರೆ. ‘ರಾಜ್ಯದಲ್ಲಿ ಟೆನಿಸ್ ಅಭಿವೃದ್ಧಿಗೆ ಅಗತ್ಯ ನೆರವನ್ನು ನೀಡಲು ಸರ್ಕಾರ ಸಿದ್ಧವಿದೆ. ಎಟಿಪಿ ಟೂರ್ನಿ ನಡೆಸುವ ಬಗ್ಗೆ ಸದ್ಯದಲ್ಲೇ ನಿರ್ಧಾರ ಕೈಗೊಳ್ಳಲಾಗುವುದು. ಕಬ್ಬನ್ ಪಾರ್ಕ್ ಆವರಣದಲ್ಲಿರುವ ಟೆನಿಸ್ ಕ್ರೀಡಾಂಗಣವನ್ನು ಅಂತಾರಾಷ್ಟ್ರೀಯ ಮಟ್ಟಕ್ಕೆ ಅಭಿವೃದ್ಧಿ ಮಾಡಲು ಸರ್ಕಾರ ತೀರ್ಮಾನಿಸಿದೆ’ ಎಂದರು.
‘ರಾಜ್ಯದಲ್ಲಿ ಟೆನಿಸ್ ಅಭಿವೃದ್ಧಿಗೆ ಮಾರ್ಗಸೂಚಿಗಳನ್ನು ನೀಡಿದ್ದೇವೆ. ಹೊಸ ಪತ್ರಿಭೆಗಳಿಗೆ ಸರ್ಕಾರದ ನೆರವು ಅಗತ್ಯವಿದೆ’ ಎಂದು ರೋಹನ್ ಬೋಪಣ್ಣ ಹೇಳಿದರು.
