ಬೆಂಗಳೂರು[ಡಿ.12]: ಟೀಂ ಇಂಡಿಯಾದ ಸ್ಟಾರ್ ಕ್ರಿಕೆಟಿಗ ಯುವರಾಜ್ ಸಿಂಗ್ ಇಂದು 37ನೇ ವಸಂತಕ್ಕೆ ಕಾಲಿರಿಸಿದ್ದಾರೆ. ಸಹಪಾಠಿಗಳು, ಅಭಿಮಾನಿಗಳು ಯುವಿಗೆ ಮನದುಂಬಿ ಹುಟ್ಟುಹಬ್ಬದ ಶುಭಾಶಯ ಕೋರಿದ್ದಾರೆ.

ಅಂಡರ್ 19, ಟಿ20 ಹಾಗೂ ಏಕದಿನ ವಿಶ್ವಕಪ್ ವಿಜೇತ ತಂಡದ ಸದಸ್ಯ ಯುವಿ, ಕ್ಯಾನ್ಸರ್ ವಿರುದ್ಧವೂ ಹೋರಾಡಿ ಸೈ ಎನಿಸಿಕೊಂಡಿದ್ದಾರೆ. ಟಿ20 ವಿಶ್ವಕಪ್’ನಲ್ಲಿ ಸ್ಟುವರ್ಟ್ ಬ್ರಾಡ್ ಬೌಲಿಂಗ್’ನಲ್ಲಿ 6 ಎಸೆತಗಳಲ್ಲಿ 6 ಸಿಕ್ಸರ್ ಸಿಡಿಸುವುದರ ಜತೆಗೆ ಅತಿವೇಗದ ಅರ್ಧಶತಕ ಬಾರಿಸಿದ್ದು ಯಾರಿಂದಲೂ ಮರೆಯಲು ಸಾಧ್ಯವಿಲ್ಲ.

ಯುವಿ ಹುಟ್ಟುಹಬ್ಬಕ್ಕೆ ಸಚಿನ್ ತೆಂಡುಲ್ಕರ್, ವಿವಿಎಸ್ ಲಕ್ಷ್ಮಣ್ ಸೇರಿದಂತೆ ಹಲವು ದಿಗ್ಗಜ ಕ್ರಿಕೆಟಿಗರು ಶುಭ ಕೋರಿದ್ದಾರೆ. ಅದರಲ್ಲೂ ಟ್ವೀಟ್ ಮೂಲಕ ಅಭಿಮಾನಿಗಳೊಂದಿಗೆ ಸದಾ ಸಂಪರ್ಕದಲ್ಲಿರುವ ಸೆಹ್ವಾಗ್ ಪಂಜಾಬ್ ಕ್ರಿಕೆಟಿಗನಿಗೆ ವಿನೂತನವಾಗಿ ಹುಟ್ಟುಹಬ್ಬದ ಶುಭಾಶಯ ಕೋರಿದ್ದಾರೆ.