ಬಾಕ್ಸಿಂಗ್ ಡೇ ಟೆಸ್ಟ್’ನಲ್ಲಿ ಶತಕ ಬಾರಿಸುವೆ: ರಹಾನೆ
ರಹಾನೆ ಆಡಿದ ಕೊನೆಯ 7 ಟೆಸ್ಟ್ ಪಂದ್ಯಗಳಲ್ಲಿ 5 ಅರ್ಧಶತಕಗಳನ್ನು ಸಿಡಿಸಿದ್ದಾರೆ. ಅದರಲ್ಲೂ ಇಂಗ್ಲೆಂಡ್ ವಿರುದ್ಧ ನಾಟಿಂಗ್’ಹ್ಯಾಂ ಟೆಸ್ಟ್’ನಲ್ಲಿ 81 ರನ್ ಸಿಡಿಸುವ ಮೂಲಕ ಟೀಂ ಇಂಡಿಯಾ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದರು.
ಮೆಲ್ಬರ್ನ್[ಡಿ.25]: ಭಾರತ ಕ್ರಿಕೆಟ್ ತಂಡದ ಉಪನಾಯಕ ಅಜಿಂಕ್ಯ ರಹಾನೆ ಬುಧವಾರದಿಂದ ಇಲ್ಲಿ ಆರಂಭಗೊಳ್ಳಲಿರುವ ಆಸ್ಪ್ರೇಲಿಯಾ ವಿರುದ್ಧದ 3ನೇ ಟೆಸ್ಟ್‌ನಲ್ಲಿ ಶತಕ ಇಲ್ಲವೇ ದ್ವಿಶತಕ ಬಾರಿಸುವ ವಿಶ್ವಾಸವಿದೆ ಎಂದಿದ್ದಾರೆ.
ಮೆಲ್ಬರ್ನ್ ಟೆಸ್ಟ್’ಗೆ ಟೀಂ ಇಂಡಿಯಾ ಪ್ರಕಟ: 2 ಬದಲಾವಣೆ
2 ಟೆಸ್ಟ್‌ಗಳಲ್ಲಿ ಒಟ್ಟು 164 ರನ್ ಗಳಿಸಿರುವ ರಹಾನೆ, ವರ್ಷದ ಬಳಿಕ ಮೂರಂಕಿ ಮೊತ್ತ ದಾಖಲಿಸಲು ಕಾತರಿಸುತ್ತಿದ್ದಾರೆ. ಅವರು ಕೊನೆ ಬಾರಿಗೆ ಶತಕ ಬಾರಿಸಿದ್ದು ಕಳೆದ ವರ್ಷ ಸೆಪ್ಟಂಬರ್‌ನಲ್ಲಿ ಶ್ರೀಲಂಕಾ ವಿರುದ್ಧ ಕೊಲಂಬೊ ಟೆಸ್ಟ್‌ನಲ್ಲಿ. ‘ಮೆಲ್ಬರ್ನ್ ಪಂದ್ಯದಲ್ಲಿ ದೊಡ್ಡ ಇನ್ನಿಂಗ್ಸ್ ಮೂಡಿಬರಲಿದೆ. ಅಡಿಲೇಡ್ ಹಾಗೂ ಪರ್ತ್’ನಲ್ಲಿ ನಾನು ಬ್ಯಾಟ್ ಮಾಡಿದ ರೀತಿ ನನ್ನಲ್ಲಿ ಆತ್ಮವಿಶ್ವಾಸ ಹೆಚ್ಚಿಸಿದೆ. ಉತ್ತಮ ಲಯದಲ್ಲಿದ್ದು, 100 ಇಲ್ಲವೇ 200 ರನ್ ಬಾರಿಸಲಿದ್ದೇನೆ ಎನ್ನುವ ನಂಬಿಕೆ ಇದೆ’ ಎಂದು ರಹಾನೆ ಹೇಳಿದ್ದಾರೆ.
ಕಿವಿಸ್, ಆಸಿಸ್ ODIs,T20 ಸರಣಿಗೆ ಟೀಂ ಇಂಡಿಯಾ ಪ್ರಕಟ!
ರಹಾನೆ ಆಡಿದ ಕೊನೆಯ 7 ಟೆಸ್ಟ್ ಪಂದ್ಯಗಳಲ್ಲಿ 5 ಅರ್ಧಶತಕಗಳನ್ನು ಸಿಡಿಸಿದ್ದಾರೆ. ಅದರಲ್ಲೂ ಇಂಗ್ಲೆಂಡ್ ವಿರುದ್ಧ ನಾಟಿಂಗ್’ಹ್ಯಾಂ ಟೆಸ್ಟ್’ನಲ್ಲಿ 81 ರನ್ ಸಿಡಿಸುವ ಮೂಲಕ ಟೀಂ ಇಂಡಿಯಾ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದರು.
ಭಾರತ-ಆಸ್ಟ್ರೇಲಿಯಾ ನಡುವಿನ 4 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಉಭಯ ತಂಡಗಳು 1-1ರ ಸಮಬಲ ಸಾಧಿಸಿದ್ದು, ಮೆಲ್ಬರ್ನ್’ನಲ್ಲಿ ಆರಂಭವಾಗಲಿರುವ ಮೂರನೇ ಟೆಸ್ಟ್ ಪಂದ್ಯ ಸಾಕಷ್ಟು ಕುತೂಹಲಕ್ಕೆ ಎಡೆಮಾಡಿಕೊಟ್ಟಿದೆ.