ಇಂದು ಹೈದರಾಬಾದ್‌ನಲ್ಲಿ ಐಪಿಎಲ್‌ ಆಡಳಿತ ಸಮಿತಿ ಸಭೆ ನಡೆಯಲಿದ್ದು, ಈ ಬಗ್ಗೆ ಚರ್ಚಿಸಲಾಗುವುದು ಎಂದು ಐಪಿಎಲ್‌ ಅಧ್ಯಕ್ಷ ರಾಜೀವ್‌ ಶುಕ್ಲಾ ಹೇಳಿದ್ದಾರೆ. 

ಬೆಂಗಳೂರು(ಮೇ.20): ಎಲಿಮಿನೇಟರ್‌ ಪಂದ್ಯಕ್ಕೆ ಮಳೆ ಅಡ್ಡಿಪಡಿಸಿದ ಹಿನ್ನೆಲೆಯಲ್ಲಿ, ಪ್ಲೇ-ಆಫ್‌ ಪಂದ್ಯಗಳಿಗೆ ಮೀಸಲು ದಿನ ಇಲ್ಲದಿರುವುದಕ್ಕೆ ಆಕ್ಷೇಪ ವ್ಯಕ್ತವಾಗಿತ್ತು.

ಈ ವಿಚಾರವನ್ನು ಬಿಸಿಸಿಐ ಗಂಭೀರವಾಗಿ ಪರಿಗಣಿಸಿದ್ದು, ಮುಂದಿನ ಆವೃತ್ತಿಯಿಂದ ಪ್ಲೇ-ಆಫ್‌ ವೇಳಾಪಟ್ಟಿಗೆ ಮೀಸಲು ದಿನಗಳನ್ನು ಸೇರಿಸುವ ಕುರಿತು ಚಿಂತನೆ ನಡೆಸಲಾಗಿದೆ.

ಸತತ ಆರುವಾರಗಳ ಕಾಲ ಉತ್ತಮ ಪ್ರದರ್ಶನ ತೋರಿ ಅಂಕಪಟ್ಟಿಯಲ್ಲಿ ಮಳೆಯಿಂದಾಗಿ ಪಂದ್ಯ ರದ್ದಾದರೆ, ಕೆಲತಂಡಗಳು ನಿರಾಸೆ ಅನುಭವಿಸಬೇಕಾಗಿ ಬರುತ್ತದೆ. ಹೀಗಾಗಿ ಪ್ಲೇ ಆಫ್ ಪಂದ್ಯಗಿಗೂ ಮೀಸಲು ದಿನವಿರಬೇಕೆಂಬ ಒತ್ತಾಯ ಬಲವಾಗಿ ಕೇಳಿಬರುತ್ತಿದೆ.

ಇಂದು ಹೈದರಾಬಾದ್‌ನಲ್ಲಿ ಐಪಿಎಲ್‌ ಆಡಳಿತ ಸಮಿತಿ ಸಭೆ ನಡೆಯಲಿದ್ದು, ಈ ಬಗ್ಗೆ ಚರ್ಚಿಸಲಾಗುವುದು ಎಂದು ಐಪಿಎಲ್‌ ಅಧ್ಯಕ್ಷ ರಾಜೀವ್‌ ಶುಕ್ಲಾ ಹೇಳಿದ್ದಾರೆ.