Asianet Suvarna News Asianet Suvarna News

ಟೀಂ ಇಂಡಿಯಾದಲ್ಲಿ ಬದಲಾವಣೆ-ರಿಷಬ್ ಪಂತ್‌ಗೆ ಸ್ಥಾನ

ಇಂಗ್ಲೆಂಡ್ ವಿರುದ್ಧದ ಆರಂಭಿಕ 2 ಟೆಸ್ಟ್ ಪಂದ್ಯದಲ್ಲಿ ಹಿನ್ನಡೆ ಅನುಭವಿಸಿರುವ ಟೀಂ ಇಂಡಿಯಾ ಇದೀಗ ಗೆಲುವಿಗಾಗಿ ಕಸರತ್ತು ಆರಂಭಿಸಿದೆ. ಸರಣಿ ಉಳಿಸಿಕೊಳ್ಳಲು 3ನೇ ಟೆಸ್ಟ್ ಪಂದ್ಯಕ್ಕೆ ತಂಡದಲ್ಲಿ ಮಹತ್ತರ ಬದಲಾವಣೆ ಮಾಡಲಾಗಿದೆ.

Rishab pant becomes the 291st player to represent team india test cricket
Author
Bengaluru, First Published Aug 18, 2018, 2:51 PM IST

ನಾಟಿಂಗ್‌ಹ್ಯಾಮ್(ಆ.18):ಇಂಗ್ಲೆಂಡ್ ವಿರುದ್ಧದ 3ನೇ ಟೆಸ್ಟ್ ಪಂದ್ಯಕ್ಕೆ ಟೀಂ ಇಂಡಿಯಾದಲ್ಲಿ ಮಹತ್ತರ ಬದಲಾವಣೆ ಮಾಡಲಾಗಿದೆ. ವಿಕೆಟ್ ಕೀಪರ್ ಕಮ್ ಬ್ಯಾಟ್ಸ್‌ಮನ್ ದಿನೇಶ್ ಕಾರ್ತಿಕ್ ಬದಲು ಯುವ ಕ್ರಿಕೆಟಿಗ ರಿಷಬ್ ಪಂತ್‌ಗೆ ಸ್ಥಾನ ನೀಡಲಾಗಿದೆ.

ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ರಿಷಬ್ ಪಂತ್‌ಗೆ ಟೆಸ್ಟ್ ಕ್ಯಾಪ್ ನೀಡಿ ತಂಡಕ್ಕೆ ಬರಮಾಡಿಕೊಂಡರು.  ರಿಷಬ್ ಪಂತ್ ಭಾರತ ತಂಡವನ್ನ ಪ್ರತಿನಿಧಿಸುತ್ತಿರುವ 291ನೇ ಟೆಸ್ಟ್ ಕ್ರಿಕೆಟಿಗ ಅನ್ನೋ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ. 

 

 

ಇಂಗ್ಲೆಂಡ್ ವಿರುದ್ದದ ಆರಂಭಿಕ 2 ಪಂದ್ಯದಲ್ಲಿ ಸೋತಿರುವ ಟೀಂ ಇಂಡಿಯಾ ಇದೀಗ 3ನೇ ಪಂದ್ಯದಲ್ಲಿ ಗೆಲುವಿನ ವಿಶ್ವಾಸದಲ್ಲಿದೆ. ಈ ಮೂಲಕ ಸರಣಿ ಉಳಿಸಿಕೊಳ್ಳೋ ಲೆಕ್ಕಾಚಾರದಲ್ಲಿದೆ. ಹೀಗಾಗಿ ಟ್ರೆಂಟ್‌ಬ್ರಿಡ್ಜ್ ಪಂದ್ಯ ಭಾರಿ ಕುತೂಹಲ ಕೆರಳಿಸಿದೆ.
 

Follow Us:
Download App:
  • android
  • ios