ಇಂಗ್ಲೆಂಡ್ ವಿರುದ್ಧದ ಆರಂಭಿಕ 3 ಟೆಸ್ಟ್ ಪಂದ್ಯಕ್ಕೆ ಟೀಂ ಇಂಡಿಯಾ ಆಯ್ಕೆ

https://static.asianetnews.com/images/authors/2c1b126a-9adf-5f82-ae4f-e781463685fe.jpg
First Published 18, Jul 2018, 3:47 PM IST
Rishabh Pant earns maiden call-up to Indian Test team
Highlights

ಇಂಗ್ಲೆಂಡ್ ವಿರುದ್ಧದ ಆರಂಭಿಕ 3 ಟೆಸ್ಟ್ ಪಂದ್ಯಕ್ಕೆ ಟೀಂ ಇಂಡಿಯಾ ಆಯ್ಕೆ ಮಾಡಲಾಗಿದೆ. ಆರ್ ಅಶ್ವಿನ್, ಜಡೇಜಾ ತಂಡಕ್ಕೆ ಮರಳಿದರೆ, ರೋಹಿತ್ ಶರ್ಮಾ ಸ್ಥಾನ ಪಡೆಯುವಲ್ಲಿ ವಿಫಲರಾಗಿದ್ದಾರೆ. ವಿಶೆೇಷ ಅಂದರೆ ಇದೇ ಮೊದಲ ಬಾರಿಗೆ ರಿಷಬ್ ಪಂತ್‌ಗೆ ಅವಕಾಶ ನೀಡಲಾಗಿದೆ. ಇಲ್ಲಿದೆ ಟೀಂ ಇಂಡಿಯಾ ವಿವರ

ಮುಂಬೈ(ಜು.18): ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿ ಬಳಿಕ ಇದೀಗ ಟೆಸ್ಟ್ ಟೂರ್ನಿಗೆ ಬಿಸಿಸಿಐ ತಯಾರಿ ಆರಂಭಿಸಿದೆ.  ಇದರ ಮೊದದಲ ಅಂಗವಾಗಿ ಇಂದು ಟೀಂ ಇಂಡಿಯಾ ಟೆಸ್ಟ್ ತಂಡವನ್ನ ಆಯ್ಕೆ ಮಾಡಲಾಗಿದೆ. ಇಂದು ಸಭೆ ಸೇರಿದ ಎಂ ಎಸ್ ಕೆ ಪ್ರಸಾದ್ ನೇತೃತ್ವದ ಆಯ್ಕೆ ಸಮಿತಿ ಇಂಗ್ಲೆಂಡ್ ವಿರುದ್ಧದ ಆರಂಭಿಕ 3 ಟೆಸ್ಟ್ ಪಂದ್ಯಗಳಿಗೆ ತಂಡವನ್ನ ಆಯ್ಕೆ ಮಾಡಲಾಗಿದೆ.

ವಿಕೆಟ್ ಕೀಪರ್ ವೃದ್ಧಿಮಾನ್ ಸಾಹ ಇಂಜುರಿಗೆ ತುತ್ತಾಗಿರೋ ಕಾರಣ ದಿನೇಶ್ ಕಾರ್ತಿಕ್ ಹಾಗೂ ಯುವ ಕ್ರಿಕೆಟಿಗ ರಿಷಬ್ ಪಂತ್‌ಗೆ ಸ್ಥಾನ ನೀಡಲಾಗಿದೆ. ಈ ಮೂಲಕ ಇದೇ ಮೊದಲ ಬಾರಿಗೆ ರಿಷಭ್ ಪಂತ್ ಟೆಸ್ಟ್ ತಂಡಕ್ಕೆ ಆಯ್ಕೆಯಾಗಿದ್ದಾರೆ.

 

 

ನಿಗಧಿತ ಓವರ್ ಕ್ರಿಕೆಟ್‌ನಿಂದ ಸ್ಥಾನ ವಂಚಿತರಾಗಿದ್ದ ಸ್ಪಿನ್ನರ್ ಆರ್ ಅಶ್ವಿನ್ ಹಾಗೂ ರವೀಂದ್ರ ಜಡೇಜಾ ಟೆಸ್ಟ್ ತಂಡಕ್ಕೆ ಆಯ್ಕೆಯಾಗಿದ್ದಾರೆ. ಇನ್ನು ಕನ್ನಡಿಗರಾಗಿ ಕೆಎಲ್ ರಾಹುಲ್ ಹಾಗೂ ಕರುಣ್ ನಾಯರ್ ಕೂಡ ಇಂಗ್ಲೆಂಡ್ ವಿರುದ್ಧದ ಆರಂಭಿಕ 3 ಟೆಸ್ಟ್ ಪಂದ್ಯಕ್ಕೆ ಆಯ್ಕೆಯಾಗಿದ್ದಾರೆ.

ಯುವ ಸ್ಪಿನ್ನರ್ ಕುಲದೀಪ್ ಯಾದವ್ ಟೆಸ್ಟ್ ತಂಡದಲ್ಲಿ ಸ್ಥಾನ ಉಳಿಸಿಕೊಂಡಿದ್ದಾರೆ. ಆದರೆ ಯಜುವೇಂದ್ರ ಚೆಹಾಲ್ ಟೆಸ್ಟ್ ತಂಡಕ್ಕೆ ಆಯ್ಕೆಯಾಗಿಲ್ಲ. ಟಿ20 ಹಾಗೂ ಏಕದಿನ ಟೂರ್ನಿಯಿಂದ ಹೊರಬಿದ್ದ ಜಸ್‌ಪ್ರೀತ್ ಬುಮ್ರಾ ಇದೀಗ ಟೆಸ್ಟ್ ತಂಡಕ್ಕೆ ಮರಳಿದ್ದಾರೆ. ಆದರೆ ಭುವನೇಶ್ವರ್ ಕುಮಾರ್ ಬೆನ್ನು ನೋವಿನಿಂದ ಬಳಲುತ್ತಿದ್ದಾರೆ. ಹೀಗಾಗಿ ಭುವಿ ಚೇತರಿಸಿಕೊಂಡರೆ ತಂಡ ಸೇರಿಕೊಳ್ಳಲಿದ್ದಾರೆ ಎಂದು ಬಿಸಿಸಿಐ ಸ್ಪಷ್ಟಪಡಿಸಿದೆ.  ಪತ್ನಿ ಆರೋಪದಿಂದ ಮೊಹಮ್ಮದ್ ಶಮಿಗೆ ಶಾಕ್ ನೀಡಿದ್ದ ಬಿಸಿಸಿಐ ಇದೀಗ ಇಂಗ್ಲೆಂಡ್ ವಿರುದ್ಧದ ಸರಣಿಗೆ ಆಯ್ಕೆ ಮಾಡಿದೆ.

ಭಾರತ ತಂಡ:
ವಿರಾಟ್ ಕೊಹ್ಲಿ(ನಾಯಕ), ಅಜಿಂಕ್ಯ ರಹಾನೆ(ಉಪನಾಯಕ), ಶಿಖರ್ ಧವನ್, ಕೆಎಲ್ ರಾಹುಲ್, ಮುರಳಿ ವಿಜಯ್, ಚೇತೇಶ್ವರ್ ಪೂಜಾರ, ದಿನೇಶ್ ಕಾರ್ತಿಕ್, ರಿಷಬ್ ಪಂತ್, ಆರ್ ಅಶ್ವಿನ್ , ರವೀಂದ್ರ ಜಡೇಜಾ, ಕುಲದೀಪ್ ಯಾದವ್, ಹಾರ್ದಿಕ್ ಪಾಂಡ್ಯ, ಇಶಾಂತ್ ಶರ್ಮಾ, ಮೊಹಮ್ಮದ್ ಶಮಿ, ಉಮೇಶ್ ಯಾದವ್, ಜಸ್‌ಪ್ರೀತ್ ಬುಮ್ರಾ, ಶಾರ್ದೂಲ್ ಠಾಕೂರ್.
 

loader