ನಾಟಿಂಗ್’ಹ್ಯಾಮ್[ಆ.19]: ಭಾರತ-ಇಂಗ್ಲೆಂಡ್ ನಡುವಿನ ಮೂರನೇ ಟೆಸ್ಟ್ ಪಂದ್ಯದಲ್ಲಿ ಪದಾರ್ಪಣೆ ಮಾಡಿದ ವಿಕೆಟ್ ಕೀಪರ್ ಬ್ಯಾಟ್ಸ್’ಮನ್ ರಿಶಭ್ ಪಂತ್ ಸ್ಫೋಟಕ ಸಿಕ್ಸರ್ ಸಿಡಿಸುವ ಮೂಲಕ ಖಾತೆ ತೆರೆದು ಗಮನ ಸೆಳೆದಿದ್ದಾರೆ.

ದಿನೇಶ್ ಕಾರ್ತಿಕ್ ಬದಲು ತಂಡದಲ್ಲಿ ಸ್ಥಾನ ಪಡೆದ ಪಂತ್ ತಾವೆದುರಿಸಿದ ಎರಡನೇ ಎಸೆತದಲ್ಲೇ ಭರ್ಜರಿ ಸಿಕ್ಸರ್ ಸಿಡಿಸುವುದರೊಂದಿಗೆ ಟೆಸ್ಟ್ ವೃತ್ತಿಜೀವನ ಆರಂಭಿಸಿದ್ದಾರೆ. ಆದಿಲ್ ರಶೀದ್ ಬೌಲಿಂಗ್’ನಲ್ಲಿ ಸಿಕ್ಸರ್ ಸಿಡಿಸಿ ರನ್ ಖಾತೆ ತೆರೆದರು.

ಪಂತ್ ಸಿಕ್ಸರ್ ಸಿಡಿಸಿದ ವಿಡಿಯೋ ನೋಡಲು ಈ ಲಿಂಕ್ ಕ್ಲಿಕ್ ಮಾಡಿ

ಟಾಸ್ ಸೋತರೂ ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆದ ಭಾರತ ಮೊದಲ ದಿನದಾಟ ಮುಕ್ತಾಯಕ್ಕೆ 6 ವಿಕೆಟ್ ನಷ್ಟಕ್ಕೆ 307 ರನ್ ಕಲೆ ಹಾಕಿದೆ. ರಿಶಭ್ ಪಂತ್ ಅಜೇಯ 22 ರನ್ ಸಿಡಿಸಿ ಎರಡನೇ ದಿನಕ್ಕೆ ಬ್ಯಾಟಿಂಗ್ ಕಾಯ್ದಿರಿಸಿಕೊಂಡಿದ್ದರೆ.