ಮುಂಬೈ ಬ್ಯಾಟ್ಸ್'ಮನ್ ರೋಹಿತ್ ಏಕದಿನ ಕ್ರಿಕೆಟ್'ನಲ್ಲಿ ಗರಿಷ್ಠ ವೈಯುಕ್ತಿಕ ರನ್(264) ಸಿಡಿಸಿದ ಆಟಗಾರ ಎನ್ನುವ ದಾಖಲೆ ನಿರ್ಮಿಸಿ ಇಂದಿಗೆ 3 ವರ್ಷ.
ನವದೆಹಲಿ(ನ.13): ಏಕದಿನ ಕ್ರಿಕೆಟ್'ನಲ್ಲಿ ಎರಡು ಬಾರಿ ದ್ವಿಶತಕ ಸಿಡಿಸಿದ ಏಕೈಕ ಬ್ಯಾಟ್ಸ್'ಮನ್ ಎನ್ನುವ ಕೀರ್ತಿಗೆ ಭಾಜನರಾಗಿರುವ ರೋಹಿತ್ ಶರ್ಮಾ ಇತಿಹಾಸ ನಿರ್ಮಿಸಿ ಇಂದಿಗೆ ಮೂರು ವರ್ಷವಾಯ್ತು.
ಹೌದು ಮುಂಬೈ ಬ್ಯಾಟ್ಸ್'ಮನ್ ರೋಹಿತ್ ಏಕದಿನ ಕ್ರಿಕೆಟ್'ನಲ್ಲಿ ಗರಿಷ್ಠ ವೈಯುಕ್ತಿಕ ರನ್(264) ಸಿಡಿಸಿದ ಆಟಗಾರ ಎನ್ನುವ ದಾಖಲೆ ನಿರ್ಮಿಸಿ ಇಂದಿಗೆ 3 ವರ್ಷ.
2014ರಲ್ಲಿ ಶ್ರೀಲಂಕಾ ವಿರುದ್ಧ ಈಡನ್ ಗಾರ್ಡನ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ರೋಹಿತ್ 173 ಎಸೆತಗಳಲ್ಲಿ 264 ರನ್ ಸಿಡಿಸಿದ್ದರು. ಅವರ ಸ್ಫೋಟಕ ಇನಿಂಗ್ಸ್'ನಲ್ಲಿ 33 ಬೌಂಡರಿ ಹಾಗು 9 ಆಕರ್ಷಕ ಸಿಕ್ಸರ್'ಗಳು ಸೇರಿದ್ದವು. ರೋಹಿತ್ ಶರ್ಮಾ ಇದುವರೆಗೆ ಏಕದಿನ ಕ್ರಿಕೆಟ್'ನಲ್ಲಿ 15 ಶತಕ ಸಿಡಿಸಿದ್ದಾರೆ.
ರೋಹಿತ್ ಸಿಡಿಲಬ್ಬರದ ಬ್ಯಾಟಿಂಗ್ ನೆರವಿನಿಂದ ಭಾರತ 6 ವಿಕೆಟ್ ನಷ್ಟಕ್ಕೆ 404 ರನ್ ಕಲೆ ಹಾಕಿತ್ತು.

ಇದಕ್ಕೂ ಮೊದಲು ರೋಹಿತ್ ಶರ್ಮಾ 2012ರಲ್ಲಿ ಬೆಂಗಳೂರಿನಲ್ಲಿ ಆಸ್ಟ್ರೇಲಿಯಾ ವಿರುದ್ಧ ನಡೆದ ಪಂದ್ಯದಲ್ಲಿ 209 ರನ್ ಸಿಡಿಸಿದ್ದರು. ಈ ಮೂಲಕ ಏಕದಿನ ಕ್ರಿಕೆಟ್'ನಲ್ಲಿ ದ್ವಿಶತಕ ಸಿಡಿಸಿದ ಮೂರನೇ ಕ್ರಿಕೆಟಿಗ ಎನ್ನುವ ಖ್ಯಾತಿಗೆ ರೋಹಿತ್ ಭಾಜನರಾಗಿದ್ದರು. ಇದಕ್ಕೂ ಮೊದಲು ಸಚಿನ್ ತೆಂಡೂಲ್ಕರ್(200*) ಹಾಗೂ ವಿರೇಂದ್ರ ಸೆಹ್ವಾಗ್(219) ರನ್ ಬಾರಿಸಿದ್ದರು.
