ಇಲ್ಲಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ (ಎನ್‌ಸಿಎ) ಯಲ್ಲಿ ನಡೆದ ಫಿಟ್ನೆಸ್ ಟೆಸ್ಟ್‌ನಲ್ಲಿ ರೋಹಿತ್ ಶರ್ಮಾ ಯೋ ಯೋ ಟೆಸ್ಟ್ ಪಾಸ್ ಮಾಡಿದ್ದಾರೆ. ಕಳೆದ ವಾರವಷ್ಟೇ ಟೀಂ ಇಂಡಿಯಾ ಕ್ರಿಕೆಟಿಗರು ಯೋ ಯೋ ಟೆಸ್ಟ್’ನಲ್ಲಿ ಪಾಲ್ಗೊಂಡಿದ್ದರು. ಆಟಗಾರರ ಫಿಟ್ನೆಸ್ ಕಾಪಾಡಿಕೊಳ್ಳುವುದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಎಲ್ಲಾ ಆಟಗಾರರಿಗೂ ಯೋ ಯೋ ಟೆಸ್ಟ್‌ನ್ನು ಕಡ್ಡಾಯಗೊಳಿಸಿದೆ.
ಬೆಂಗಳೂರು[ಜೂ.20]: ಟೀಂ ಇಂಡಿಯಾ ಉಪನಾಯಕ ರೋಹಿತ್ ಶರ್ಮಾ ಯೋ ಯೋ ಟೆಸ್ಟ್ ಉತ್ತೀರ್ಣರಾಗಿದ್ದಾರೆ. ಈ ಮೂಲಕ ಮುಂಬರುವ ಯೂರೋಪ್ ಪ್ರವಾಸಕ್ಕೆ ಟಿಕೆಟ್ ಖಚಿತ ಪಡಿಸಿಕೊಂಡಿದ್ದಾರೆ.
ಇಲ್ಲಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ (ಎನ್‌ಸಿಎ) ಯಲ್ಲಿ ನಡೆದ ಫಿಟ್ನೆಸ್ ಟೆಸ್ಟ್‌ನಲ್ಲಿ ರೋಹಿತ್ ಶರ್ಮಾ ಯೋ ಯೋ ಟೆಸ್ಟ್ ಪಾಸ್ ಮಾಡಿದ್ದಾರೆ. ಕಳೆದ ವಾರವಷ್ಟೇ ಟೀಂ ಇಂಡಿಯಾ ಕ್ರಿಕೆಟಿಗರು ಯೋ ಯೋ ಟೆಸ್ಟ್’ನಲ್ಲಿ ಪಾಲ್ಗೊಂಡಿದ್ದರು. ಆಟಗಾರರ ಫಿಟ್ನೆಸ್ ಕಾಪಾಡಿಕೊಳ್ಳುವುದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಎಲ್ಲಾ ಆಟಗಾರರಿಗೂ ಯೋ ಯೋ ಟೆಸ್ಟ್‌ನ್ನು ಕಡ್ಡಾಯಗೊಳಿಸಿದೆ.
ಇದನ್ನೂ ಓದಿ:ಸಂಜು ಫಿಟ್ನೆಸ್ ಪರೀಕ್ಷೆ ಫೇಲಾಗಲು ಕಾರಣವೇನು? ಅಷ್ಟಕ್ಕೂ ಯೋ ಯೋ ಟೆಸ್ಟ್ ಅಂದ್ರೇನು..?
ಆದರೆ ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಬಿಸಿಸಿಐ ಅನುಮತಿ ಪಡೆದು ರೋಹಿತ್ ಶರ್ಮಾ ರಷ್ಯಾಗೆ ತೆರಳಿದ್ದರು. ಹೀಗಾಗಿ ಯೋ ಯೋ ಟೆಸ್ಟ್’ನಲ್ಲಿ ಪಾಲ್ಗೊಂಡಿರಲಿಲ್ಲ. ಎರಡು ದಿನಗಳ ಹಿಂದಷ್ಟೇ ರೋಹಿತ್ ಯೋ ಯೋ ಟೆಸ್ಟ್’ನಲ್ಲಿ ಪಾಲ್ಗೊಳ್ಳಲಿದ್ದಾರೆ ಎನ್ನಲಾಗುತ್ತಿತ್ತು. ಆದರೆ ಫಿಟ್ನೆಸ್ ಟೆಸ್ಟ್ ಪದೇ ಪದೇ ಮುಂದೂಡಲಾಗುತ್ತಿತ್ತು. ಜೊತೆಗೆ ಅಜಿಂಕ್ಯ ರಹಾನೆ ಅವರನ್ನು ಬದಲಿ ಆಟಗಾರರನ್ನಾಗಿ ಬಿಸಿಸಿಐ ಆಯ್ಕೆ ಮಾಡಿಕೊಂಡಿತ್ತು. ಆದರೆ ಇದೀಗ ರೋಹಿತ್ ಯೋ ಯೋ ಟೆಸ್ಟ್ ಪಾಸ್ ಮಾಡಿದ್ದರಿಂದ ಇದೇ ಜೂನ್ 27 ರಿಂದ ಆರಂಭವಾಗಲಿರುವ ಐರ್ಲೆಂಡ್ ವಿರುದ್ಧದ 2 ಟಿ20 ಪಂದ್ಯ ಹಾಗೂ ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲಿ ಕಣಕ್ಕಿಳಿಯುವುದು ಖಚಿತವಾದಂತಾಗಿದೆ.
ಈ ಮೊದಲು ನಡೆದ ಯೋ ಯೋ ಟೆಸ್ಟ್’ನಲ್ಲಿ ಶಮಿ, ರಾಯುಡು ಹಾಗೂ ಸಂಜು ಸ್ಯಾಮ್ಸನ್ ಫಿಟ್ನೆಸ್ ಸಾಭೀತು ಮಾಡಲು ವಿಫಲರಾಗಿದ್ದರು. ರಾಯುಡು ಬದಲಿಗೆ ಸುರೇಶ್ ರೈನಾ ಅವರಿಗೆ ಅವಕಾಶ ಕಲ್ಪಿಸಲಾಗಿತ್ತು.