ಲಾಡರ್‌ಹಿಲ್‌(ಆ.03): ಭಾರತದ ರೋಹಿತ್‌ ಶರ್ಮಾ ಅಂತಾರಾಷ್ಟ್ರೀಯ ಟಿ20ಯಲ್ಲಿ ಗರಿಷ್ಠ ಸಿಕ್ಸರ್‌ ಬಾರಿಸಿದ ಆಟಗಾರ ಎನ್ನುವ ದಾಖಲೆ ಬರೆಯುವ ಹೊಸ್ತಿಲಲ್ಲಿದ್ದಾರೆ. ವಿಂಡೀಸ್‌ನ ಕ್ರಿಸ್‌ ಗೇಲ್‌ ಹೆಸರಿನಲ್ಲಿರುವ ವಿಶ್ವ ದಾಖಲೆಯನ್ನು ಮುರಿಯಲು ರೋಹಿತ್‌ಗೆ ಕೇವಲ 4 ಸಿಕ್ಸರ್‌ಗಳ ಅವಶ್ಯಕತೆ ಇದೆ. ವೆಸ್ಟ್ ಇಂಡೀಸ್ ವಿರುದ್ಧದ ಸರಣಿಯಲ್ಲಿ ರೋಹಿತ್ ಈ ದಾಖಲೆ ಬರೆಯಲು ಸಜ್ಜಾಗಿದ್ದಾರೆ.

ಇದನ್ನೂ ಓದಿ: ವಿಶ್ವಕಪ್ 2019: ಗರಿಷ್ಠ ರನ್ ಸಿಡಿಸಿದ ಟಾಪ್ 5 ಬ್ಯಾಟ್ಸಮನ್ ಲಿಸ್ಟ್!

ಭಾರತ ಪರ 94 ಪಂದ್ಯಗಳನ್ನು ಆಡಿರುವ ರೋಹಿತ್‌ 102 ಸಿಕ್ಸರ್‌ ಸಿಡಿಸಿದ್ದಾರೆ. ವಿಂಡೀಸ್‌ ಪರ 58 ಪಂದ್ಯಗಳಲ್ಲಿ ಗೇಲ್‌ 105 ಸಿಕ್ಸರ್‌ ಬಾರಿಸಿ ಅಗ್ರಸ್ಥಾನದಲ್ಲಿದ್ದಾರೆ. ನ್ಯೂಜಿಲೆಂಡ್‌ನ ಮಾರ್ಟಿನ್‌ ಗಪ್ಟಿಲ್‌ 103 ಸಿಕ್ಸರ್‌ಗಳೊಂದಿಗೆ 2ನೇ ಸ್ಥಾನದಲ್ಲಿದ್ದಾರೆ. ವಿಂಡೀಸ್‌ ವಿರುದ್ಧದ ಸರಣಿಯಲ್ಲಿ ರೋಹಿತ್‌ ಅಗ್ರಸ್ಥಾನಕ್ಕೇರುವ ನಿರೀಕ್ಷೆ ಇದೆ. ಆಗಸ್ಟ್ 3 ರಿಂದ ವೆಸ್ಟ್ ಇಂಡೀಸ್ ವಿರುದ್ದದ 3 ಟಿ20 ಸರಣಿ ಆರಂಭಗೊಳ್ಳಲಿದೆ.