Asianet Suvarna News Asianet Suvarna News

ಸಖತ್ತಾಗಿ ವೀಕೆಂಡ್ ಎಂಜಾಯ್ ಮಾಡಿದ ಹಿಟ್’ಮ್ಯಾನ್..!

ಭಾರತೀಯ ಕ್ರಿಕೆಟ್ ಆಟಗಾರರು ಗಲ್ಲಿ ಕ್ರಿಕೆಟ್ ಆಡುತ್ತಿರುವುದು ಇದೇ ಮೊದಲಲ್ಲ. ಇದಕ್ಕೂ ಮೊದಲು ಕ್ರಿಕೆಟ್ ದಿಗ್ಗಜ ಸಚಿನ್ ತೆಂಡುಲ್ಕರ್, ವಿರಾಟ್ ಕೊಹ್ಲಿ ಮತ್ತು ಧೋನಿ ಗಲ್ಲಿ ಕ್ರಿಕೆಟ್ ಆಡಿರುವ ವಿಡಿಯೋಗಳು ವೈರಲ್ ಆಗಿದ್ದವು.

Rohit Sharma spends playing gully cricket in Mumbai
Author
Mumbai, First Published Oct 29, 2018, 1:51 PM IST
  • Facebook
  • Twitter
  • Whatsapp

ಮುಂಬೈ[ಅ.29]: ಭಾರತ ಕ್ರಿಕೆಟ್ ತಂಡದ ಆರಂಭಿಕ ರೋಹಿತ್ ಶರ್ಮಾ, ಮುಂಬೈನಲ್ಲಿ ಹುಡುಗರೊಂದಿಗೆ ಗಲ್ಲಿ ಕ್ರಿಕೆಟ್ ಆಡಿದ್ದಾರೆ. ರೋಹಿತ್ ಇಲ್ಲಿನ ಬೀದಿಯೊಂದರಲ್ಲಿ ಹುಡುಗರೊಂದಿಗೆ ಗಲ್ಲಿ ಕ್ರಿಕೆಟ್ ಆಡುತ್ತಿರುವ ವಿಡಿಯೋ ಸಾಮಾಜಿಕ ತಾಣದಲ್ಲಿ ವೈರಲ್ ಆಗಿದೆ.

ಇದನ್ನು ಓದಿ: ಹ್ಯಾಟ್ರಿಕ್ ಶತಕ ಸಿಡಿಸಿದ ಟಾಪ್ 10 ಬ್ಯಾಟ್ಸ್’ಮನ್’ಗಳಿವರು..!

ಹೀಗೆ ಭಾರತೀಯ ಕ್ರಿಕೆಟ್ ಆಟಗಾರರು ಗಲ್ಲಿ ಕ್ರಿಕೆಟ್ ಆಡುತ್ತಿರುವುದು ಇದೇ ಮೊದಲಲ್ಲ. ಇದಕ್ಕೂ ಮೊದಲು ಕ್ರಿಕೆಟ್ ದಿಗ್ಗಜ ಸಚಿನ್ ತೆಂಡುಲ್ಕರ್, ಸೌರವ್ ಗಂಗೂಲಿ, ವಿರಾಟ್ ಕೊಹ್ಲಿ ಮತ್ತು ಧೋನಿ ಗಲ್ಲಿ ಕ್ರಿಕೆಟ್ ಆಡಿರುವ ವಿಡಿಯೋಗಳು ವೈರಲ್ ಆಗಿದ್ದವು.

ಇದನ್ನು ಓದಿ: ಗಲ್ಲಿ ಕ್ರಿಕೆಟ್ ಆಡಿದ ದಾದಾ

ವೆಸ್ಟ್ ಇಂಡೀಸ್ ವಿರುದ್ಧದ ಸರಣಿಯಲ್ಲಿ ರೋಹಿತ್ ಶರ್ಮಾ ಇದುವರೆಗೆ ಮೂರು ಪಂದ್ಯಗಳನ್ನು ಆಡಿದ್ದು, 82ರ ಸರಾಸರಿಯಲ್ಲಿ 164 ರನ್ ಬಾರಿಸಿದ್ದಾರೆ. ಗುವಾಹಟಿಯಲ್ಲಿ ನಡೆದ ಚೊಚ್ಚಲ ಪಂದ್ಯದಲ್ಲೇ 152 ರನ್ ಸಿಡಿಸಿ ಅಜೇಯವಾಗಿ ತಂಡವನ್ನು ಗೆಲುವಿನ ದಡ ಸೇರಿಸಿದ್ದರು. 

Follow Us:
Download App:
  • android
  • ios