ಉಭಯ ತಂಡಗಳು ಈಗಾಗಲೇ ಮೊದಲ ಪಂದ್ಯದಲ್ಲಿ ಆಘಾತ ಅನುಭವಿಸಿದ್ದು, ಪ್ರಸ್ತುತ ಆವೃತ್ತಿಯ ಮೊದಲ ಗೆಲುವಿನ ಕನವರಿಕೆಯಲ್ಲಿವೆ. ಬೆಂಗಳೂರಿನಲ್ಲಿ ಆರ್’ಸಿಬಿ ಚೊಚ್ಚಲ ಗೆಲುವಿನ ನಿರೀಕ್ಷೆಯಲ್ಲಿದೆ.
ಬೆಂಗಳೂರು[ಮಾ.28]: 12ನೇ ಆವೃತ್ತಿಯ ಐಪಿಎಲ್ ಟೂರ್ನಿಯ ಕಾವು ಜೋರಾಗುತ್ತಿದ್ದು, ಇಂದು ಬೆಂಗಳೂರಿನ ಎಂ. ಚಿನ್ನಸ್ವಾಮಿ ಮೈದಾನದಲ್ಲಿ ಆತಿಥೇಯ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಮುಂಬೈ ಇಂಡಿಯನ್ಸ್ ತಂಡಗಳು ಮುಖಾಮುಖಿಯಾಗುತ್ತಿದ್ದು, ಟಾಸ್ ಗೆದ್ದ ಆಯ್ದುಕೊಂಡಿದೆ.
ಉಭಯ ತಂಡಗಳು ಈಗಾಗಲೇ ಮೊದಲ ಪಂದ್ಯದಲ್ಲಿ ಆಘಾತ ಅನುಭವಿಸಿದ್ದು, ಪ್ರಸ್ತುತ ಆವೃತ್ತಿಯ ಮೊದಲ ಗೆಲುವಿನ ಕನವರಿಕೆಯಲ್ಲಿವೆ. ಉದ್ಘಾಟನಾ ಪಂದ್ಯದಲ್ಲಿ ಚೆನ್ನೈ ವಿರುದ್ಧ ನೀರಸ ಪ್ರದರ್ಶನ ತೋರಿದ್ದ RCB ತವರಿನಲ್ಲಿ ಗೆಲುವಿನ ಹಳಿಗೆ ಮರಳಲು ಯತ್ನಿಸುತ್ತಿದೆ. ಇನ್ನು ಮೂರು ಬಾರಿಯ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡವು ಡೆಲ್ಲಿ ಎದುರು ತವರಿನಲ್ಲೇ ಆಘಾತಕಾರಿ ಸೋಲು ಕಂಡಿತ್ತು. ಇದೀಗ ರೋಹಿತ್ ಪಡೆ ಆತಿಥೇಯ ತಂಡಕ್ಕೆ ಶಾಕ್ ನೀಡಲು ಎದುರು ನೋಡುತ್ತಿದೆ.
ಬೆಂಗಳೂರು ಮೈದಾನದವು ಆತಿಥೇಯ RCBಗಿಂತ ಪ್ರವಾಸಿ ಮುಂಬೈ ಇಂಡಿಯನ್ಸ್ ಪಾಲಿಗೆ ಅದೃಷ್ಟದ ಮೈದಾನವಾಗಿದ್ದು, ಇದುವರೆಗೂ ಚಿನ್ನಸ್ವಾಮಿ ಮೈದಾನದಲ್ಲಿ ಉಭಯ ತಂಡಗಳು 9 ಬಾರಿ ಮುಖಾಮುಖಿಯಾಗಿದ್ದು, 7 ಬಾರಿ ಮುಂಬೈ ಗೆದ್ದರೆ, ಕೇವಲ 2 ಬಾರಿ ಮಾತ್ರ ಬೆಂಗಳೂರು ಗೆಲುವಿನ ನಗೆ ಬೀರಿದೆ.
ತಂಡಗಳು ಹೀಗಿವೆ
RCB:
MI:
