ಡೆಲ್ಲಿ ಆಟಗಾರನ ಬ್ಯಾಟಿಂಗ್ ಬಗ್ಗೆ ಸಚಿನ್ ಸೇರಿದಂತೆ ಕ್ರಿಕೆಟ್ ದಿಗ್ಗಜರು ಪ್ರತಿಕ್ರಿಯಿಸಿದ್ದು ಹೀಗೆ...

ಬೆಂಗಳೂರು(ಮೇ.05): ಫಿರೋಜ್ ಶಾ ಕೋಟ್ಲಾ ಮೈದಾನದಲ್ಲಿ ಗುಜರಾತ್ ಲಯನ್ಸ್ 20 ಓವರ್'ಗಳಲ್ಲಿ ಕಲೆಹಾಕಿದ್ದು ಬರೋಬ್ಬರಿ 208ರನ್. ಇದಕ್ಕುತ್ತರವಾಗಿ ಡೆಲ್ಲಿ ಡೇರ್'ಡೆವಿಲ್ಸ್ ತಂಡ ಇನ್ನೂ 15 ಎಸೆತಗಳು ಬಾಕಿ ಇರುವಂತೆಯೇ ಸ್ಮರಣೀಯ ಗೆಲುವನ್ನು ತನ್ನದಾಗಿಸಿಕೊಳ್ಳುವಲ್ಲಿ ಯಶಸ್ವಿಯಾಯಿತು.

ಇದಕ್ಕೆಲ್ಲಾ ಕಾರಣವಾಗಿದ್ದು ಡೆಲ್ಲಿ ಯುವ ಪ್ರತಿಭೆ ರಿಷಭ್ ಪಂತ್ ಹಾಗೂ ಕೇರಳ ಆಟಗಾರ ಸಂಜು ಸ್ಯಾಮ್ಸನ್ ಸ್ಪೋಟಕ ಬ್ಯಾಟಿಂಗ್..!

ಬೃಹತ್ ಗುರಿ ಬೆನ್ನತ್ತಿದ್ದ ಡೆಲ್ಲಿ ಡೇರ್'ಡೆವಿಲ್ಸ್ ಪಡೆಗೆ, 2015ರ ವಿಶ್ವಕಪ್ ಫೈನಲ್ ಪಂದ್ಯದ ಹೀರೋ ಜೇಮ್ಸ್ ಫಾಲ್ಕನರ್ ಆಗಲಿ, ಟೆಸ್ಟ್ ಕ್ರಿಕೆಟ್'ನ ನಂಬರ್ ಒನ್ ಬೌಲರ್ ರವೀಂದ್ರ ಜಡೇಜಾ ಅವರಾಗಲೀ ಸವಾಲು ಎನಿಸಲೇ ಇಲ್ಲ.

ಅಬ್ಬರದ ಬ್ಯಾಟಿಂಗ್ ನಡೆಸಿದ ರಿಷಭ್ ಪಂತ್, ಕೇವಲ 43 ಎಸೆತಗಳಲ್ಲಿ 6 ಬೌಂಡರಿ ಹಾಗೂ 9 ಭರ್ಜರಿ ಸಿಕ್ಸರ್'ಗಳ ನೆರವಿನಿಂದ 97ರನ್ ಸಿಡಿಸಿ ಮಿಂಚಿದರು. ಡೆಲ್ಲಿ ಆಟಗಾರನ ಬ್ಯಾಟಿಂಗ್ ಬಗ್ಗೆ ಸಚಿನ್ ಸೇರಿದಂತೆ ಕ್ರಿಕೆಟ್ ದಿಗ್ಗಜರು ಪ್ರತಿಕ್ರಿಯಿಸಿದ್ದು ಹೀಗೆ...

Scroll to load tweet…
Scroll to load tweet…
Scroll to load tweet…