ಬೈಕ್ ಸವಾರ ಹಾಗೂ ಹಿಂಬದಿ ಸವಾರರು ಇಬ್ಬರು ಹೆಲ್ಮೆಟ್ ಕಡ್ಡಾಯವಾಗಿ ಧರಿಸಬೇಕು. ದಯವಿಟ್ಟು ನಿಮ್ಮ ಸುರಕ್ಷತೆಗಾಗಿ ಹೆಲ್ಮೆಟ್ ಧರಿಸಿ ಎಂದು ಸಚಿನ್ ತೆಂಡುಲ್ಕರ್ ಮನವಿ ಮಾಡಿಕೊಂಡಿದ್ದಾರೆ.

ತಿರುವನಂತಪುರಂ(ನ.04): ಸುರಕ್ಷತೆಯ ದೃಷ್ಟಿಯಿಂದ ಕಡ್ಡಾಯವಾಗಿ ಹೆಲ್ಮೆಟ್ ಧರಿಸಿ ಎಂದು ದ್ವಿಚಕ್ರ ವಾಹನ ಚಾಲನೆ ಮಾಡುತ್ತಿದ್ದವರಿಗೆ ಮಾಜಿ ಕ್ರಿಕೆಟಿಗ ಸಚಿನ್ ತೆಂಡುಲ್ಕರ್ ಮತ್ತೊಮ್ಮೆ ಮನವಿ ಮಾಡಿದ್ದಾರೆ.

ತಾವು ಪ್ರಯಾಣ ಮಾಡುತ್ತಿದ್ದ ಕಾರಿನ ಪಕ್ಕದಲ್ಲಿ ಸಾಗುತ್ತಿದ್ದ ಕೆಲ ಬೈಕ್‌'ಗಳ ಹಿಂಬದಿ ಸವಾರರು ಹೆಲ್ಮೆಟ್ ಧರಿಸದೆ ಇರುವುದನ್ನು ಗಮನಿಸಿದ ಸಚಿನ್, ಕಾರಿನ ಗಾಜನ್ನು ಇಳಿಸಿ ತಪ್ಪದೇ ಹೆಲ್ಮೆಟ್ ಧರಿಸುವಂತೆ ಮನವಿ ಮಾಡಿದ್ದಾರೆ.

ಬೈಕ್ ಸವಾರ ಹಾಗೂ ಹಿಂಬದಿ ಸವಾರರು ಇಬ್ಬರು ಹೆಲ್ಮೆಟ್ ಕಡ್ಡಾಯವಾಗಿ ಧರಿಸಬೇಕು. ದಯವಿಟ್ಟು ನಿಮ್ಮ ಸುರಕ್ಷತೆಗಾಗಿ ಹೆಲ್ಮೆಟ್ ಧರಿಸಿ ಎಂದು ಸಚಿನ್ ತೆಂಡುಲ್ಕರ್ ಮನವಿ ಮಾಡಿಕೊಂಡಿದ್ದಾರೆ.

ಹೆಲ್ಮೆಟ್ ಧರಿಸದೆ ಇರುವುದರಿಂದ ಆಗುವ ಅಪಾಯದ ಕುರಿತು ಸಾಮಾಜಿಕ ತಾಣಗಳಲ್ಲಿ ಎಚ್ಚರಿಕೆ ನೀಡಿದ್ದು, ಇದೀಗ ಈ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ.