ಕೆಕೆಆರ್ ಮಣಿಸಿದ ಚೆನ್ನೈ ಸೂಪರ್ ಕಿಂಗ್ಸ್| ಗೆಲುವಿನ ಆಟದ ಬಳಿಕ ಸುಸ್ತಾದ ಮಹಿ| ಚೆನ್ನೈ ವಿಮಾನ ನಿಲ್ದಾಣದಲ್ಲಿ ನೆಲದಲ್ಲೇ ಮಲಗಿದ ಧೋನಿ, ಸಾಕ್ಷಿ

ಚೆನ್ನೈ[ಏ.11]: ಚೆನ್ನೈ ಸೂಪರ್ ಕಿಂಗ್ಸ್ ನಾಯಕ ಮಹೇಂದ್ರ ಸಿಂಗ್ ಧೋನಿ ಮತ್ತು ಅವರ ಪತ್ನಿ ಸಾಕ್ಷಿ ಬುಧವಾರ ಬೆಳಗ್ಗೆ ಚೆನ್ನೈ ವಿಮಾನ ನಿಲ್ದಾಣದಲ್ಲಿ ನೆಲದ ಮೇಲೆಯೇ ತಮ್ಮ ಬ್ಯಾಗನ್ನೇ ತಲೆದಿಂಬನ್ನಾಗಿಸಿಕೊಂಡು ಮಲಗಿರುವ ಫೋಟೋವನ್ನು ತಾವೇ ಇನ್‌ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿಕೊಂಡಿದ್ದಾರೆ.

View post on Instagram

ಈ ಫೋಟೋ ಈಗ ಸಖತ್ ವೈರಲ್ ಆಗಿದೆ. ಧೋನಿ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ನೆಚ್ಚಿನ ಕ್ರಿಕೆಟಿಗನ ಸರಳತೆಯ ಬಗ್ಗೆ ಗುಣಗಾನ ಮಾಡುತ್ತಿದ್ದಾರೆ. 

ಓರ್ವ ಅಭಿಮಾನಿಯಂತೂ ’ಮೌನವಾಗಿರಿ, ದೇವರು ವಿಶ್ರಾಂತಿ ಪಡೆಯುತ್ತಿದ್ದಾರೆ' ಎಂದು ಕಮೆಂಟ್ ಮಾಡಿದ್ದಾನೆ.