2016ರಲ್ಲಿ ಸಾನಿಯಾ ಮಿರ್ಜಾ ಹಾಗೂ ಮಾರ್ಟೀನಾ ಹಿಂಗೀಸ್ ಜೋಡಿ ಆಸ್ಟ್ರೇಲಿಯನ್ ಓಪನ್ ಮಹಿಳೆಯರ ಡಬಲ್ಸ್'ನಲ್ಲಿ ಚಾಂಪಿಯನ್ ಪಟ್ಟಕ್ಕೇರಿತ್ತು

ನವದೆಹಲಿ(ಡಿ.16): ಆಸ್ಟ್ರೇಲಿಯನ್ ಓಪನ್ ಹಾಲಿ ಚಾಂಪಿಯನ್ ಸಾನಿಯಾ ಮಿರ್ಜಾ ಪ್ರಸಕ್ತ ಸಾಲಿನ ಗ್ರ್ಯಾಂಡ್'ಸ್ಲಾಂ ಟೂರ್ನಿಯಿಂದ ಹೊರಗುಳಿಯಲು ತೀರ್ಮಾನಿಸಿದ್ದಾರೆ.

ಹೌದು, ಮುಂಡಿ ನೋವು ಸಮಸ್ಯೆಯಿಂದ ಬಳಲುತ್ತಿರುವ ಸಾನಿಯಾ, ಮುಂದಿನ ತಿಂಗಳಿನಿಂದ ಆರಂಭವಾಗಲಿರುವ ಆಸ್ಟ್ರೇಲಿಯನ್ ಓಪನ್'ನಿಂದ ದೂರವಿರಲು ನಿರ್ಧರಿಸಿದ್ದಾರೆ.

ನನ್ನ ಮೊಣಕಾಲು ಗಾಯದ ಸಮಸ್ಯೆಯಿಂದ ಸಾಕಷ್ಟು ನೋವುಂಟು ಮಾಡುತ್ತಿದೆ. ಕೆಲ ತಿಂಗಳ ಹಿಂದಷ್ಟೇ ವೈದ್ಯರ ಬಳಿ ಚರ್ಚಿಸಿದ್ದೆ. ಇದೀಗ ಶಸ್ತ್ರ ಚಿಕಿತ್ಸೆಗೆ ಒಳಗಾಗಲು ತೀರ್ಮಾನಿಸಿದ್ದೇನೆ. ಶಸ್ತ್ರ ಚಿಕಿತ್ಸೆ ಬಳಿಕ ಕೆಲಕಾಲ ವಿಶ್ರಾಂತಿಯ ಅಗತ್ಯವಿದ್ದು, ಈ ಬಾರಿಯ ಆಸ್ಟ್ರೇಲಿಯನ್ ಓಪನ್ ಟೂರ್ನಿಯನ್ನು ಮಿಸ್ ಮಾಡಿಕೊಳ್ಳುತ್ತಿದ್ದೇನೆ ಎಂದು ಸಾನಿಯಾ ತಿಳಿಸಿದ್ದಾರೆ.

2016ರಲ್ಲಿ ಸಾನಿಯಾ ಮಿರ್ಜಾ ಹಾಗೂ ಮಾರ್ಟೀನಾ ಹಿಂಗೀಸ್ ಜೋಡಿ ಆಸ್ಟ್ರೇಲಿಯನ್ ಓಪನ್ ಮಹಿಳೆಯರ ಡಬಲ್ಸ್'ನಲ್ಲಿ ಚಾಂಪಿಯನ್ ಪಟ್ಟಕ್ಕೇರಿತ್ತು