‘ಧೋನಿ ಇದೀಗ ಮ್ಯಾಚ್ ವಿನ್ನರ್ ಆಗಿ ಉಳಿದಿಲ್ಲ. ಅವರಿಗಿಂತ ಚೆನ್ನಾಗಿ ಆಡಬಲ್ಲ ಆಟಗಾರರು ತಂಡದಿಂದ ಹೊರಗೆ ಅವಕಾಶಕ್ಕಾಗಿ ಕಾಯುತ್ತಿದ್ದಾರೆ ಎಂದಿದ್ದಾರೆ ಅವರನ್ನು ತಂಡಕ್ಕೆ ಸೇರಿಸುವ ಬಗ್ಗೆ ಚಿಂತಿಸಬೇಕಾದ ಕಾಲ ಬಂದಿದೆ. ಈ ಕುರಿತು ಆರೋಗ್ಯಕರ ಚರ್ಚೆ ನಡೆಯಲಿ, ಆಕ್ರೋಶ ವ್ಯಕ್ತಪಡಿಸುವುದು ಬೇಡ’ ಎಂದು ವೆಬ್‌'ಸೈಟ್‌'ವೊಂದಕ್ಕೆ ಬರೆದ ಅಂಕಣವೊಂದರಲ್ಲಿ ಮಾಂಜ್ರೇಕರ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ನವದೆಹಲಿ(ನ.23): ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ನಿವೃತ್ತಿ ಘೋಷಿಸಬೇಕೆಂಬ ಒತ್ತಡ ಹೆಚ್ಚಾಗುತ್ತಿರುವ ಬೆನ್ನಲ್ಲೇ ಮಾಜಿ ಕ್ರಿಕೆಟಿಗ, ವೀಕ್ಷಕ ವಿವರಣೆಗಾರ ಸಂಜಯ್ ಮಾಂಜ್ರೇಕರ್ ಸಹ ಧೋನಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

‘ಧೋನಿ ಇದೀಗ ಮ್ಯಾಚ್ ವಿನ್ನರ್ ಆಗಿ ಉಳಿದಿಲ್ಲ. ಅವರಿಗಿಂತ ಚೆನ್ನಾಗಿ ಆಡಬಲ್ಲ ಆಟಗಾರರು ತಂಡದಿಂದ ಹೊರಗೆ ಅವಕಾಶಕ್ಕಾಗಿ ಕಾಯುತ್ತಿದ್ದಾರೆ ಎಂದಿದ್ದಾರೆ ಅವರನ್ನು ತಂಡಕ್ಕೆ ಸೇರಿಸುವ ಬಗ್ಗೆ ಚಿಂತಿಸಬೇಕಾದ ಕಾಲ ಬಂದಿದೆ. ಈ ಕುರಿತು ಆರೋಗ್ಯಕರ ಚರ್ಚೆ ನಡೆಯಲಿ, ಆಕ್ರೋಶ ವ್ಯಕ್ತಪಡಿಸುವುದು ಬೇಡ’ ಎಂದು ವೆಬ್‌'ಸೈಟ್‌'ವೊಂದಕ್ಕೆ ಬರೆದ ಅಂಕಣವೊಂದರಲ್ಲಿ ಮಾಂಜ್ರೇಕರ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಮಾಂಜ್ರೇಕರ್ ಅವರ ಈ ಹೇಳಿಕೆಗೆ ಸಾಕಷ್ಟು ಟೀಕೆಗಳು ವ್ಯಕ್ತವಾಗಿವೆ. ಧೋನಿ ಸದ್ಯ ಕ್ರಿಕೆಟ್ ಆಡಲು ಸಮರ್ಥರಾಗಿದ್ದಾರೆ. ಮಾಜಿ ಆಟಗಾರ ಮಾಂಜ್ರೇಕರ್ ಅವರಿಂದ ಈ ತರಹದ ಹೇಳಿಕೆಗಳನ್ನು ನಿರೀಕ್ಷಿಸಿರಲಿಲ್ಲ ಎಂದು ಮಾಜಿ ಕ್ರಿಕೆಟಿಗರು ಹೇಳಿದ್ದಾರೆ.