ಭಾರತ ಪ್ರವಾಸ ಕೈಗೊಳ್ಳಲಿರುವ ಪಾಕಿಸ್ತಾನ ಕ್ರಿಕೆಟ್ ತಂಡಕ್ಕೆ ಪಾಕಿಸ್ತಾನದ ಮಾಜಿ ಆಫ್ ಸ್ಪಿನ್ನರ್ ಸಕ್ಲೇನ್ ಮುಷ್ತಾಕ್ ಅವರನ್ನು ಸಲಹೆಗಾರರನ್ನಾಗಿ ನೇಮಿಸಲಾಗಿದೆ.

ಕರಾಚಿ(ಅ.25): ಮುಂದಿನ ತಿಂಗಳು ಭಾರತ ಪ್ರವಾಸ ಕೈಗೊಳ್ಳಲಿರುವ ಪಾಕಿಸ್ತಾನ ಕ್ರಿಕೆಟ್ ತಂಡಕ್ಕೆ ಪಾಕಿಸ್ತಾನದ ಮಾಜಿ ಆಫ್ ಸ್ಪಿನ್ನರ್ ಸಕ್ಲೇನ್ ಮುಷ್ತಾಕ್ ಅವರನ್ನು ಸಲಹೆಗಾರರನ್ನಾಗಿ ನೇಮಿಸಲಾಗಿದೆ.

ಇಂಗ್ಲೆಂಡ್ ಕ್ರಿಕೆಟ್ ಸಂಸ್ಥೆ ಈ ನಿರ್ಧಾರವನ್ನು ಪ್ರಕಟಿಸಿದೆ. ಉರಿ ಭಯೋತ್ಪಾದಕ ದಾಳಿಯ ನಂತರ ಪಾಕಿಸ್ತಾನ ಆಟಗಾರರಿಗೆ, ಕಲಾವಿದರಿಗೆ ಭಾರತದಲ್ಲಿ ನಿಷೇಧ ಹೇರಲಾಗಿದೆ.

ಇತ್ತೀಚೆಗೆ ನಡೆದ ಕಬಡ್ಡಿ ವಿಶ್ವಕಪ್‌ನಿಂದಲೂ ಪಾಕಿಸ್ತಾನವನ್ನು ಉಚ್ಛಾಟಿಸಲಾಗಿತ್ತು. ಈ ಹಿನ್ನೆಲೆಯಲ್ಲಿ, ಆಂಗ್ಲರ ತಂಡದೊಂದಿಗೆ ಸಕ್ಲೇನ್ ಮುಷ್ತಾಕ್ ಅವರು ಭಾರತ ಪ್ರವೇಶಿಸುವಾಗ ಯಾವ ವಿವಾದ ಏಳುತ್ತದೋ ಕಾದು ನೋಡಬೇಕಿದೆ.

ಅಂದಹಾಗೆ, ಭಾರತ-ಇಂಗ್ಲೆಂಡ್ ನಡುವಿನ ಐದು ಪಂದ್ಯಗಳ ಟೆಸ್ಟ್ ಸರಣಿ ನ. 9ರಿಂದ ಆರಂಭಗೊಳ್ಳಲಿದೆ.