ಸುಮಾರು ಏಳು ವರ್ಷಗಳ ಕಾಲ ಪಾಕಿಸ್ತಾನ ಟೆಸ್ಟ್ ತಂಡವನ್ನು ಮುನ್ನಡೆಸಿದ್ದ ಮಿಸ್ಬಾ-ಉಲ್-ಹಕ್ ಇತ್ತೀಚೆಗಷ್ಟೇ ವಿದಾಯ ಹೇಳಿದ್ದರು.

ಕರಾಚಿ(ಜೂ.21): ಚಾಂಪಿಯನ್ಸ್ ಟ್ರೋಫಿ ಗೆದ್ದು ನೂತನ ಇತಿಹಾಸ ಬರೆದ ಪಾಕಿಸ್ತಾನ ಸೀಮಿತ ಓವರ್‌'ಗಳ ತಂಡದ ನಾಯಕ ಸಫ್ರಾಜ್ ಅಹ್ಮದ್ ಅವರನ್ನೇ ಟೆಸ್ಟ್ ತಂಡದ ನಾಯಕನನ್ನಾಗಿ ಆಯ್ಕೆ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಚಾಂಪಿಯನ್ಸ್ ಟ್ರೋಫಿಯ ಫೈನಲ್ ಪಂದ್ಯದ ವೇಳೆಯೇ ಈ ತೀರ್ಮಾನ ಕೈಗೊಳ್ಳಲಾಗಿದ್ದು, ಅಧಿಕೃತ ಘೋಷಣೆ ಮಾತ್ರ ಬಾಕಿ ಇದೆ ಎನ್ನಲಾಗಿದೆ.

ಸುಮಾರು ಏಳು ವರ್ಷಗಳ ಕಾಲ ಪಾಕಿಸ್ತಾನ ಟೆಸ್ಟ್ ತಂಡವನ್ನು ಮುನ್ನಡೆಸಿದ್ದ ಮಿಸ್ಬಾ-ಉಲ್-ಹಕ್ ಇತ್ತೀಚೆಗಷ್ಟೇ ವಿದಾಯ ಹೇಳಿದ್ದರು. ಹೀಗಾಗಿ ಅವರಿಂದ ತೆರವಾದ ಸ್ಥಾನಕ್ಕೆ ಸಫ್ರಾಜ್ ಅಹ್ಮದ್ ಅವರನ್ನು ನೇಮಕ ಮಾಡಲಾಗಿದೆ ಎನ್ನಲಾಗುತ್ತಿದೆ.

30 ವರ್ಷದ ಸಫ್ರಾಜ್ ಅಹ್ಮದ್ ಈಗಾಗಲೇ ಏಕದಿನ ಹಾಗೂ ಟಿ20 ತಂಡವನ್ನು ಮುನ್ನಡೆಸುತ್ತಿದ್ದಾರೆ.