ನೆಟ್ಸ್‌ನಲ್ಲಿ ವಿರಾಟ್ ಕೊಹ್ಲಿಗೆ ಬೌಲಿಂಗ್ ಮಾಡಿದ ಅರ್ಜುನ್ ತೆಂಡೂಲ್ಕರ್

https://static.asianetnews.com/images/authors/56bf5dcb-7868-50e0-b2d0-38391a34809d.jpg
First Published 8, Aug 2018, 8:23 PM IST
Schin son Arjun tendulkar Bowls to Team india at lords
Highlights

ಸಚಿನ್ ತೆಂಡೂಲ್ಕರ್ ಪುತ್ರ ಅರ್ಜುನ್ ತೆಂಡೂಲ್ಕರ್, ಟೀಂ ಇಂಡಿಯಾ ಕ್ರಿಕೆಟಿಗರ ಜೊತೆ ಅಭ್ಯಾಸದಲ್ಲಿ ಪಾಲ್ಗೊಳ್ಳುತ್ತಿರುವುದು ಇದೇ ಮೊದಲಲ್ಲ. ಆದರೆ ಟೀಂ ಇಂಡಿಯಾ ಅಂಡರ್ 19 ತಂಡ ಪ್ರತಿನಿಧಿಸಿದ ಬಳಿಕ ಇದೇ ಮೊದಲ ಬಾರಿಗೆ ಅರ್ಜುನ್ ತೆಂಡೂಲ್ಕರ್ , ವಿರಾಟ್ ಕೊಹ್ಲಿಗೆ ಬೌಲಿಂಗ್ ಮಾಡಿ ಸೈ ಎನಿಸಿಕೊಂಡಿದ್ದಾರೆ.

ಲಾರ್ಡ್ಸ್(ಆ.08): ಇಂಗ್ಲೆಂಡ್ ವಿರುದ್ಧದ ದ್ವಿತೀಯ ಟೆಸ್ಟ್ ಪಂದ್ಯಕ್ಕೆ ಟೀಂ ಇಂಡಿಯಾ ಅಂತಿಮ ಕಸರತ್ತು ನಡೆಸುತ್ತಿದೆ. ಲಾರ್ಡ್ಸ್ ಮೈದಾನದಲ್ಲಿ ಅಭ್ಯಾಸ ನಡೆಸುತ್ತಿರುವ ಭಾರತ ತಂಡದ ಜೊತೆ ಮಾಸ್ಟರ್ ಬ್ಲಾಸ್ಟರ್ ಪುತ್ರ ಅರ್ಜುನ್ ತೆಂಡೂಲ್ಕರ್ ಸೇರಿಕೊಂಡಿದ್ದಾರೆ.

ಮೊದಲ ಪಂದ್ಯದ ಸೋಲಿಗೆ ತಿರುಗೇಟು ನೀಡಲು ಸಜ್ಜಾಗಿರುವ ಭಾರತ ತಂಡ ಕಠಿಣ ಅಭ್ಯಾಸ ಮಾಡಿದೆ. ಅಭ್ಯಾಸದ ವೇಳೆ ನಾಯಕ ವಿರಾಟ್ ಕೊಹ್ಲಿ ಸೇರಿದಂತೆ ಟೀಂ ಇಂಡಿಯಾ ಬ್ಯಾಟ್ಸ್‌ಮನ್‌ಗಳಿಗೆ ಅರ್ಜುನ್ ತೆಂಡೂಲ್ಕರ್ ಬೌಲಿಂಗ್ ಮಾಡಿದ್ದಾರೆ. ಅದ್ಬುತ ಬೌಲಿಂಗ್ ದಾಳಿ ನಡಸೋ ಮೂಲಕ ಭಾರತದ ಬ್ಯಾಟ್ಸ್‌ಮನ್‌ಗಳ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

ಶ್ರೀಲಂಕಾ ವಿರುದ್ಧದ ಅಂಡರ್ 19 ಪಂದ್ಯದಲ್ಲಿ ಅರ್ಜುನ್ ತೆಂಡೂಲ್ಕರ್ ಅದ್ಬುತ ಬೌಲಿಂಗ್ ದಾಳಿ ನಡೆಸಿ ಗಮನಸೆಳೆದಿದ್ದರು. ಆದರೆ ಬ್ಯಾಟಿಂಗ್‌ನಲ್ಲಿ ನಿರೀಕ್ಷಿತ ಪ್ರದರ್ಶನ ನೀಡಲು ಸಾಧ್ಯವಾಗಿರಲಿಲ್ಲ. ಲಂಕಾ ವಿರುದ್ಧದ ಸರಣಿ ಅರ್ಜುನ್ ತೆಂಡೂಲ್ಕರ್  ಬಳಿಕ ಇದೀಗ ಟೀಂ ಇಂಡಿಯಾ ಜೊತೆಗೆ ಅಭ್ಯಾಸದಲ್ಲಿ ತೊಡಗಿಸಿಕೊಂಡಿದ್ದಾರೆ.

loader