ಈಗಾಗಲೇ ಟೀಂ ಇಂಡಿಯಾ ಟೆಸ್ಟ್ ಹಾಗೂ ಏಕದಿನ ಶ್ರೇಯಾಂಕ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ.

ರಾಂಚಿ(ಅ.07): ಈಗಾಗಲೇ ಏಕದಿನ ಸರಣಿಯಲ್ಲಿ ಆಸ್ಟ್ರೇಲಿಯಾ ವಿರುದ್ಧ ಅದ್ಭುತ ಪ್ರದರ್ಶನ ತೋರಿರುವ ಟೀಂ ಇಂಡಿಯಾ ಇಂದಿನಿಂದ ಆರಂಭವಾಗಲಿರುವ ಟಿ20 ಸರಣಿಯಲ್ಲೂ ಉತ್ತಮ ಪ್ರದರ್ಶನ ತೋರುವ ನಿರೀಕ್ಷೆಯಲ್ಲಿದೆ. ಆಸ್ಟ್ರೇಲಿಯಾವನ್ನು 4-1 ಅಂತರದಲ್ಲಿ ಮಣಿಸಿರುವ ಕೊಹ್ಲಿ ಪಡೆ ಏಕದಿನ ಕ್ರಿಕೆಟ್ ಶ್ರೇಯಾಂಕದಲ್ಲಿ ಅಗ್ರಸ್ಥಾನಕ್ಕೇರಿದೆ. ಇದೀಗ ಟಿ20 ಕ್ರಿಕೆಟ್ ಮೇಲೆ ಕಣ್ಣಿಟ್ಟಿದೆ.

ಆಸ್ಟ್ರೇಲಿಯಾ ವಿರುದ್ಧ 3 ಪಂದ್ಯಗಳ ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಿದರೆ ಐಸಿಸಿ ಟಿ20 ಶ್ರೇಯಾಂಕ ಪಟ್ಟಿಯಲ್ಲಿ ಭಾರತ 2ನೇ ಸ್ಥಾನಕ್ಕೇರಲಿದೆ. ಇದಾದ ಬಳಿಕ ಅಗ್ರ ಸ್ಥಾನದಲ್ಲಿರುವ ನ್ಯೂಜಿಲೆಂಡ್ ವಿರುದ್ಧ ಸರಣಿ ಗೆದ್ದರೆ ಭಾರತ, ನಂ.1 ಪಟ್ಟಕ್ಕೇರಲಿದೆ.

ಈಗಾಗಲೇ ಟೀಂ ಇಂಡಿಯಾ ಟೆಸ್ಟ್ ಹಾಗೂ ಏಕದಿನ ಶ್ರೇಯಾಂಕ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ.