ಪಾಕಿಸ್ತಾನದಲ್ಲಿ ಕ್ರಿಕೆಟ್ ಮಂಡಳಿಯ ಅಧ್ಯಕ್ಷರನ್ನು ದೇಶದ ಪ್ರಧಾನಿ ನಾಮನಿರ್ದೇಶನ ಮಾಡುತ್ತಾರೆ.

ಕರಾಚಿ(ಮೇ.01): ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ) ಮುಖ್ಯಸ್ಥ ಶಹರ್ಯಾರ್ ಖಾನ್ ಸಲ್ಲಿಸಿದ್ದ ರಾಜೀನಾಮೆಯನ್ನು ಪಾಕ್ ಪ್ರಧಾನಿ ನವಾಜ್ ಶರೀಫ್ ತಿರಸ್ಕರಿಸಿದ್ದು, 3 ವರ್ಷಗಳ ಅವಧಿಯನ್ನು ಪೂರ್ಣಗೊಳಿಸುವಂತೆ ಸೂಚಿಸಿದ್ದಾರೆ ಎಂದು ವರದಿಯಾಗಿದೆ.

ದುಬೈನಲ್ಲಿ ನಡೆದ ಐಸಿಸಿ ಸಭೆಗೆ ತೆರಳುವ ಮೊದಲೇ ಖಾನ್ ತಮ್ಮ ರಾಜೀನಾಮೆ ಪತ್ರವನ್ನು ಪಾಕ್ ಪ್ರಧಾನಿ ನವಾಜ್ ಶರೀಫ್ ಅವರಿಗೆ ಸಲ್ಲಿಸಿದ್ದರು.

ಆರೋಗ್ಯ ಹಾಗೂ ವೈಯಕ್ತಿಕ ಕಾರಣದಿಂದ ಹುದ್ದೆಗೆ ರಾಜೀನಾಮೆ ನೀಡುತ್ತಿದ್ದು, ಏಪ್ರಿಲ್ 30ರಂದು ತಮ್ಮ ಹುದ್ದೆಯಿಂದ ಕೆಳಗಿಳಿಯುವುದಾಗಿ ರಾಜೀನಾಮೆ ಪತ್ರದಲ್ಲಿ ಖಾನ್ ತಿಳಿಸಿದ್ದರು ಎನ್ನಲಾಗಿದೆ. ಆದರೆ ಈ ರಾಜೀನಾಮೆ ತಿರಸ್ಕರಿಸಿರುವ ನವಾಜ್, ಸಭೆ ಬಳಿಕ ಪಾಕ್‌'ಗೆ ಹಿಂದಿರುಗಿ ತಮ್ಮ ಹುದ್ದೆಯಲ್ಲಿ ಮುಂದುವರಿಯುವಂತೆ ಸೂಚಿಸಿದ್ದಾರೆ.

ಪಾಕಿಸ್ತಾನದಲ್ಲಿ ಕ್ರಿಕೆಟ್ ಮಂಡಳಿಯ ಅಧ್ಯಕ್ಷರನ್ನು ದೇಶದ ಪ್ರಧಾನಿ ನಾಮನಿರ್ದೇಶನ ಮಾಡುತ್ತಾರೆ.