ದುಬೈ[ಮೇ.23]: ಐಸಿಸಿ ಏಕದಿನ ಆಲ್ರೌಂಡರ್‌ಗಳ ರ‍್ಯಾಂಕಿಂಗ್ ಪಟ್ಟಿಯನ್ನು ಬುಧವಾರ ಬಿಡುಗಡೆಗೊಳಿಸಿದ್ದು, ಆಫ್ಘಾನಿಸ್ತಾನದ ರಶೀದ್ ಖಾನ್‌ರನ್ನು ಹಿಂದಿಕ್ಕಿದ ಬಾಂಗ್ಲಾದೇಶದ ಅನುಭವಿ ಆಟಗಾರ ಶಕೀಬ್ ಅಲ್ ಹಸನ್ ಅಗ್ರಸ್ಥಾನಕ್ಕೇರಿದ್ದಾರೆ. ಆದರೆ, ಅಗ್ರ 10ರಲ್ಲಿ ಟೀಂ ಇಂಡಿಯಾದ ಯಾವೊಬ್ಬ ಆಟಗಾರರು ಸ್ಥಾನ ಪಡೆದಿಲ್ಲ.

ಏಕದಿನ ವಿಶ್ವಕಪ್‌ಗೆ ಭಾರತ ತಂಡದಲ್ಲಿ ಸ್ಥಾನ ಪಡೆದಿರುವ ಕೇದಾರ್ ಜಾಧವ್, ದಕ್ಷಿಣ ಆಫ್ರಿಕಾದ ಆ್ಯಂಡಿಲೆ ಫೆಹ್ಲುಕ್ವಾಯೊ ಹಾಗೂ ಇಂಗ್ಲೆಂಡ್‌ನ ಮೋಯಿನ್ ಅಲಿ ಜಂಟಿಯಾಗಿ 12ನೇ ಸ್ಥಾನವನ್ನು ಹಂಚಿಕೊಂಡಿದ್ದಾರೆ. ಶಕೀಬ್ ಮೊದಲ ಸ್ಥಾನದಲ್ಲಿದ್ದರೆ, ರಶೀದ್ ಖಾನ್ ಹಾಗೂ ಮೊಹಮ್ಮದ್ ನಬಿ ಕ್ರಮವಾಗಿ ಎರಡು ಹಾಗೂ ಮೂರನೇ ಸ್ಥಾನದಲ್ಲಿದ್ದಾರೆ

ಪಾಕಿಸ್ತಾನದ ಇಬ್ಬರು ಆಟಗಾರರು ಟಾಪ್ 10 ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ. ಇಮಾದ್ ವಾಸೀಂ ನಾಲ್ಕನೇ ಸ್ಥಾನದಲ್ಲಿದ್ದರೆ, ಮೊಹಮ್ಮದ್ ಹಫೀಜ್ ಏಳನೇ ಸ್ಥಾನದಲ್ಲಿದ್ದಾರೆ. ಹಾರ್ದಿಕ್ ಪಾಂಡ್ಯ 20ನೇ ರ‍್ಯಾಂಕಿಂಗ್‌ಗೆ ತೃಪಿಪಟ್ಟುಕೊಂಡಿದ್ದಾರೆ.