ರಾಜಸ್ಥಾನ ರಾಯಲ್ಸ್ ತಂಡ 2 ವರ್ಷಗಳ ನಿಷೇಧದ ಬಳಿಕ, 11ನೇ ಆವೃತ್ತಿಯ ಐಪಿಎಲ್'ನಲ್ಲಿ ಕಣಕ್ಕಿಳಿಯುತ್ತಿದೆ. ಸ್ಪಿನ್ ಮಾಂತ್ರಿಕ ವಾರ್ನ್, 2011ರಲ್ಲಿ ಕಡೆಯದಾಗಿ ಐಪಿಎಲ್ ಟೂರ್ನಿಯಲ್ಲಿ ಮೈದಾನದಲ್ಲಿ ಕಾಣಿಸಿಕೊಂಡಿದ್ದರು. ನಾಲ್ಕು ವರ್ಷಗಳ ಕಾಲ ಐಪಿಎಲ್ ಟೂರ್ನಿಯಲ್ಲಿ ರಾಜಸ್ಥಾನ ರಾಯಲ್ಸ್ ತಂಡವನ್ನು ಪ್ರತಿನಿಧಿಸಿದ್ದ ವಾರ್ನ್ 50ಕ್ಕೂ ಹೆಚ್ಚು ವಿಕೆಟ್ ಕಬಳಿಸಿದ್ದರು.
ಮೆಲ್ಬರ್ನ್(ಫೆ.06): ಐಪಿಎಲ್ ಟೂರ್ನಿಗೆ ಮರಳಲು ಸಿದ್ಧವಾಗಿರುವುದಾಗಿ ಆಸ್ಟ್ರೇಲಿಯಾದ ಮಾಜಿ ಕ್ರಿಕೆಟಿಗ ಶೇನ್ ವಾರ್ನ್ ಟ್ವೀಟ್ ಮಾಡಿದ್ದಾರೆ. 2008ರಲ್ಲಿ ರಾಜಸ್ಥಾನ್ ರಾಯಲ್ಸ್ ತಂಡವನ್ನು ಚಾಂಪಿಯನ್ ಪಟ್ಟಕ್ಕೇರಿಸಿದ್ದ ವಾರ್ನ್ ಈ ಬಾರಿ ತಂಡದ ಕೋಚ್ ಇಲ್ಲವೇ ಸಲಹೆಗಾರರಾಗಿ ಕಾರ್ಯನಿರ್ವಹಿಸಲಿದ್ದಾರೆ ಎನ್ನಲಾಗಿದೆ.
ರಾಜಸ್ಥಾನ ರಾಯಲ್ಸ್ ತಂಡ 2 ವರ್ಷಗಳ ನಿಷೇಧದ ಬಳಿಕ, 11ನೇ ಆವೃತ್ತಿಯ ಐಪಿಎಲ್'ನಲ್ಲಿ ಕಣಕ್ಕಿಳಿಯುತ್ತಿದೆ. ಸ್ಪಿನ್ ಮಾಂತ್ರಿಕ ವಾರ್ನ್, 2011ರಲ್ಲಿ ಕಡೆಯದಾಗಿ ಐಪಿಎಲ್ ಟೂರ್ನಿಯಲ್ಲಿ ಮೈದಾನದಲ್ಲಿ ಕಾಣಿಸಿಕೊಂಡಿದ್ದರು. ನಾಲ್ಕು ವರ್ಷಗಳ ಕಾಲ ಐಪಿಎಲ್ ಟೂರ್ನಿಯಲ್ಲಿ ರಾಜಸ್ಥಾನ ರಾಯಲ್ಸ್ ತಂಡವನ್ನು ಪ್ರತಿನಿಧಿಸಿದ್ದ ವಾರ್ನ್ 50ಕ್ಕೂ ಹೆಚ್ಚು ವಿಕೆಟ್ ಕಬಳಿಸಿದ್ದರು.
ಪ್ರಸಕ್ತ ಸಾಲಿನ ಐಪಿಎಲ್ ಆಟಗಾರರ ಹರಾಜಿನಲ್ಲಿ ರಾಜಸ್ಥಾನ ರಾಯಲ್ಸ್ ತಂಡ ಇಂಗ್ಲೆಂಡ್ ಆಲ್ರೌಂಡರ್ ಬೆನ್ ಸ್ಟೋಕ್ಸ್ ಅವರನ್ನು 12.5 ಕೋಟಿ ನೀಡಿ ಖರೀದಿಸಿದರೆ, ಜಯದೇವ್ ಉನಾದ್ಕತ್ ಅವರನ್ನು 11.5 ಕೋಟಿ ರುಪಾಯಿಗೆ ಖರೀದಿಸಿದೆ. ಅಲ್ಲದೇ ಕನ್ನಡಿಗ ಆಲ್ರೌಂಡರ್ ಕೆ. ಗೌತಮ್ ಅವರನ್ನು 6.2 ಕೋಟಿ ನೀಡಿ ಖರೀದಿಸುವ ಮೂಲಕ 11 ನೇ ಆವೃತ್ತಿಯಲ್ಲಿ ಭರ್ಜರಿಯಾಗಿ ಎಂಟ್ರಿಕೊಡುವ ನಿರೀಕ್ಷೆಯಲ್ಲಿದೆ. ಇನ್ನು ಆಸೀಸ್ ನಾಯಕ ಸ್ಟೀವ್ ಸ್ಮಿತ್ ಮುನ್ನಡೆಸುವ ಸಾಧ್ಯತೆಯಿದೆ.