ಇದಕ್ಕೂ ಮೊದಲು ಟಾಸ್ ಸೋತರೂ ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆದ ಭಾರತ ನಾಯಕ ರೋಹಿತ್ ಶರ್ಮಾರ ಸಿಡಿಲಬ್ಬರದ ದ್ವಿಶತಕ(208*) ಹಾಗೂ ಶಿಖರ್ ಧವನ್ ಮತ್ತು ಶ್ರೇಯಸ್ ಅಯ್ಯರ್ ಅವರ ಮಿಂಚಿನ ಅರ್ಧಶತಕದ ನೆರವಿನಿಂದ ಟೀಂ ಇಂಡಿಯಾ 392 ರನ್ ಕಲೆಹಾಕಿತ್ತು.

ಮೊಹಾಲಿ(ಡಿ.13): ನಾಯಕ ರೋಹಿತ್ ಶರ್ಮಾ ಬಾರಿಸಿದ ಆಕರ್ಷಕ ದ್ವಿಶತಕ ಹಾಗೂ ಬೌಲರ್'ಗಳ ಸಂಘಟಿತ ಪ್ರದರ್ಶನದ ನೆರವಿನಿಂದ ಟೀಂ ಇಂಡಿಯಾ ಎರಡನೇ ಪಂದ್ಯದಲ್ಲಿ ಶ್ರೀಲಂಕಾ ವಿರುದ್ಧ 141 ರನ್'ಗಳ ಭರ್ಜರಿ ಜಯ ದಾಖಲಿಸಿದೆ. ಈ ಗೆಲುವಿನೊಂದಿಗೆ ಸರಣಿಯಲ್ಲಿ ಟೀಂ ಇಂಡಿಯಾ 1-1 ಸಮಬಲ ಸಾಧಿಸಿದೆ. ಇದೀಗ ಡಿ.17ರಂದು ವಿಶಾಖಪಟ್ನಂನಲ್ಲಿ ನಡೆಯಲಿರುವ ಮೂರನೇ ಹಾಗೂ ನಿರ್ಣಾಯಕ ಪಂದ್ಯವು ಸಾಕಷ್ಟು ಕುತೂಹಲಕ್ಕೆ ಎಡೆಮಾಡಿಕೊಟ್ಟಿದೆ.

ಟೀಂ ಇಂಡಿಯಾ ನೀಡಿದ್ದ 393 ರನ್'ಗಳ ಬೃಹತ್ ಮೊತ್ತಕ್ಕೆ ಉತ್ತರವಾಗಿ ಲಂಕಾ ಪಡೆ ನಿಗದಿತ 50 ಓವರ್'ಗಳಲ್ಲಿ 8 ವಿಕೆಟ್ ಕಳೆದುಕೊಂಡು 251 ರನ್ ಗಳಿಸಲಷ್ಟೇ ಶಕ್ತವಾಯಿತು. ಲಂಕಾ ಪರ ಮಾಜಿ ನಾಯಕ ಆ್ಯಂಜಲೋ ಮ್ಯಾಥ್ಯೂಸ್ ಅಜೇಯ ಶತಕ(111) ಬಾರಿಸಿದ್ದು ಹೊರತುಪಡಿಸಿದರೆ, ಉಳಿದ ಬ್ಯಾಟ್ಸ್'ಮನ್'ಗಳಿಂದ ನಿರೀಕ್ಷಿತ ಪ್ರದರ್ಶನ ಮೂಡಿಬರಲಿಲ್ಲ. ಭಾರತ ಪರ ಯುಜುವೇಂದ್ರ ಚಾಹಲ್ 3 ವಿಕೆಟ್ ಪಡೆದರೆ, ಬುಮ್ರಾ 2 ಹಾಗೂ ಭುವನೇಶ್ವರ್ ಕುಮಾರ್, ಹಾರ್ದಿಕ್ ಪಾಂಡ್ಯ ಮತ್ತು ವಾಷಿಂಗ್ಟನ್ ಸುಂದರ್ ತಲಾ 1 ವಿಕೆಟ್ ಪಡೆದು ಮಿಂಚಿದರು.

ಇದಕ್ಕೂ ಮೊದಲು ಟಾಸ್ ಸೋತರೂ ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆದ ಭಾರತ ನಾಯಕ ರೋಹಿತ್ ಶರ್ಮಾರ ಸಿಡಿಲಬ್ಬರದ ದ್ವಿಶತಕ(208*) ಹಾಗೂ ಶಿಖರ್ ಧವನ್ ಮತ್ತು ಶ್ರೇಯಸ್ ಅಯ್ಯರ್ ಅವರ ಮಿಂಚಿನ ಅರ್ಧಶತಕದ ನೆರವಿನಿಂದ ಟೀಂ ಇಂಡಿಯಾ 392 ರನ್ ಕಲೆಹಾಕಿತ್ತು.

ಸಂಕ್ಷಿಪ್ತ ಸ್ಕೋರ್:

ಭಾರತ: 392/4

ರೋಹಿತ್ ಶರ್ಮಾ: 208*

ಶ್ರೇಯಸ್ ಅಯ್ಯರ್: 88

ಪೆರೇರಾ: 80/3

ಶ್ರೀಲಂಕಾ: 251/8

ಆ್ಯಂಜಲೋ ಮ್ಯಾಥ್ಯೂಸ್: 111*

ಗುಣರತ್ನೆ: 34

ಚಾಹಲ್: 60/3

ಪಂದ್ಯಪುರುಷೋತ್ತಮ: ರೋಹಿತ್ ಶರ್ಮಾ