ಇತ್ತೀಚೆಗೆ ನಡೆದ ಪಾಕಿಸ್ತಾನ ಸೂಪರ್ ಲೀಗ್ ಟೂರ್ನಿಯಲ್ಲಿ ಈ ಇಬ್ಬರು ಆಟಗಾರರು ಪ್ರಭಾವಿ ಪ್ರದರ್ಶನ ತೋರಿದ್ದರು.

ಲಾಹೋರ್(ಮಾ.15): ವೆಸ್ಟ್ ಇಂಡೀಸ್ ವಿರುದ್ಧ ಮಾ.26ರಿಂದ ಆರಂಭವಾಗಲಿರುವ 4 ಪಂದ್ಯಗಳ ಟಿ20 ಹಾಗೂ 3 ಪಂದ್ಯಗಳ ಏಕದಿನ ಸರಣಿಗಾಗಿ ಪಾಕಿಸ್ತಾನ ತಂಡವನ್ನು ಪ್ರಕಟಿಸಲಾಗಿದ್ದು, ಆರಂಭಿಕ ಆಟಗಾರ ಅಹ್ಮದ್ ಶೆಹಜಾದ್ ಮತ್ತು ಕಮ್ರನ್ ಅಕ್ಮಲ್ ಅವರನ್ನು ತಂಡದಲ್ಲಿ ಸ್ಥಾನಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

ಇತ್ತೀಚೆಗೆ ನಡೆದ ಪಾಕಿಸ್ತಾನ ಸೂಪರ್ ಲೀಗ್ ಟೂರ್ನಿಯಲ್ಲಿ ಈ ಇಬ್ಬರು ಆಟಗಾರರು ಪ್ರಭಾವಿ ಪ್ರದರ್ಶನ ತೋರಿದ್ದರು. ಹೀಗಾಗಿ ಇವರನ್ನು ಮತ್ತೆ ತಂಡಕ್ಕೆ ಸೇರ್ಪಡೆಗೊಳಿಸಲಾಗಿದೆ.

2016ರಲ್ಲಿ ನಡೆದಿದ್ದ ವಿಶ್ವಕಪ್ ಟಿ20 ಟೂರ್ನಿಯ ವೇಳೆ ಅಶಿಸ್ತು ತೋರಿದ್ದರು ಎಂದು ಶೆಹಜಾದ್ ಅವರನ್ನು ಪಾಕಿಸ್ತಾನ ಟಿ20 ಮತ್ತು ಏಕದಿನ ತಂಡದಿಂದ ಕೈಬಿಡಲಾಗಿತ್ತು. ಇನ್ನು 35 ವರ್ಷ ವಯಸ್ಸಿನ ಅಕ್ಮಲ್ 2014ರ ವಿಶ್ವಕಪ್ ಟಿ20 ಟೂರ್ನಿಯಲ್ಲಿ ಬಾಂಗ್ಲಾ ವಿರುದ್ಧ ಆಡಿದ್ದೆ ಕೊನೆಯ ಪಂದ್ಯವಾಗಿದೆ.