ಟೆಸ್ಟ್ ಬ್ಯಾಟಿಂಗ್ ರ‍್ಯಾಂಕಿಂಗ್‌ನಲ್ಲಿ ಬಡ್ತಿ ಪಡೆದ ಭಾರತೀಯರು ಯಾರು?

Shikhar Dhawan, Murali Vijay climb charts in ICC Test batting ranking
Highlights

ಅಫ್ಘಾನಿಸ್ತಾನ ವಿರುದ್ಧದ ಟೆಸ್ಟ್ ಪಂದ್ಯದ ಬಳಿಕ ಟೀಮ್ಇಂಡಿಯಾ ಕ್ರಿಕೆಟಿಗರು ಟೆಸ್ಟ್ ರ‍್ಯಾಂಕಿಂಗ್‌ನಲ್ಲಿ ಬಡ್ತಿ ಪಡೆದಿದ್ದಾರೆ. ಧವನ್-ವಿಜಯ್ ಬಡ್ತಿ ಪಡೆದರೆ , ನಾಯಕ ವಿರಾಟ್ ಕೊಹ್ಲಿ ಯಥಾ ಸ್ಥಾನ ಕಾಪಾಡಿಕೊಂಡಿದ್ದಾರೆ.

ಮುಂಬೈ(ಜೂ.19): ಅಫ್ಘಾನಿಸ್ತಾನ ವಿರುದ್ಧದ ಏಕೈಕ ಟೆಸ್ಟ್ ಪಂದ್ಯದಲ್ಲಿ ಭರ್ಜರಿ ಶತಕ ಸಿಡಿಸಿದ  ಟೀಮ್ಇಂಡಿಯಾ ಆರಂಭಿಕರಾದ ಶಿಖರ್ ಧವನ್ ಹಾಗಾ ಶಿಖರ್ ಧವನ್ ರ‍್ಯಾಂಕಿಂಗ್‌ನಲ್ಲಿ ಬಡ್ತಿ ಪಡೆದಿದ್ದಾರೆ. ಟೆಸ್ಟ್ ಬ್ಯಾಟಿಂಗ್ ರ‍್ಯಾಂಕಿಂಗ್‌ನಲ್ಲಿ ಮುರಳಿ ವಿಜಯ್ 23ನೇ ಸ್ಥಾನ ಅಲಂಕರಿಸಿದ್ದರೆ, ಶಿಖರ್ ಧವನ್ 24ನೇ ಸ್ಥಾನ ಪಡೆದಿದ್ದಾರೆ. 

ಬೆಂಗಳೂರಿನಲ್ಲಿ ನಡೆದ ಅಫ್ಘಾನಿಸ್ತಾನ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಮುರಳಿ ವಿಜಯ್ 105 ರನ್ ಸಿಡಿಸಿದ್ದರೆ, ಧವನಿ 107 ರನ್ ದಾಖಲಿಸಿದ್ದರು. ಈ ಮೂಲಕ ಧವನ್ 10 ಸ್ಥಾನಗಳ ಜಿಗಿತ ಕಂಡರೆ, ವಿಜಯ್ 6 ಸ್ಥಾನ ಜಿಗಿದಿದ್ದಾರೆ.

ನಾಯಕ ವಿರಾಟ್ ಕೊಹ್ಲಿ ಟೆಸ್ಟ್ ಬ್ಯಾಟಿಂಗ್ ರ‍್ಯಾಂಕಿಂಗ್‌ನಲ್ಲಿ ದ್ವಿತೀಯ ಸ್ಥಾನದಲ್ಲಿದ್ದರೆ, ಬಾಲ್ ಟ್ಯಾಂಪರಿಂಗ್‌ನಿಂದ ನಿಷೇಧಕ್ಕೊಳಗಾಗಿರುವ ಆಸ್ಟ್ರೇಲಿಯಾ ನಾಯಕ ಸ್ಟೀವ್ ಸ್ಮಿತ್ ಮೊದಲ ಸ್ಥಾನದಲ್ಲಿದ್ದಾರೆ. ಇನ್ನು ಚೇತೇಶ್ವರ್ ಪೂಜಾರ 6ನೇ ಸ್ಥಾನ ಅಲಂಕರಿಸಿದ್ದಾರೆ.

loader