ಮಾರಕ ಹಾಗೂ ಕರಾರುವಕ್ಕಾದ ದಾಳಿಯ ಮೂಲಕ ಎದುರಾಳಿ ತಂಡದ ಬ್ಯಾಟ್ಸ್’ಮನ್’ಗಳ ಎದೆಯಲ್ಲಿ ನಡುಕ ಹುಟ್ಟಿಸುತ್ತಿದ್ದ ಅಖ್ತರ್. 2003ರ ವಿಶ್ವಕಪ್ ಟೂರ್ನಿಯಲ್ಲಿ ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ 161.3 ಕಿ.ಮೀ ವೇಗದಲ್ಲಿ ಬೌಲಿಂಗ್ ಮಾಡಿದ್ದು, ಇಂದಿಗೂ ವಿಶ್ವದಾಖಲೆಯಾಗಿಯೇ ಉಳಿದಿದೆ.
ಕರಾಚಿ[ಆ.13]: ಕ್ರಿಕೆಟ್ ಜಗತ್ತು ಕಂಡ ಸಾರ್ವಕಾಲಿಕ ವೇಗದ ಬೌಲರ್, ರಾವಲ್ಪಿಂಡಿ ಎಕ್ಸ್’ಪ್ರೆಸ್ ಖ್ಯಾತಿಯ ಶೋಯೆಬ್ ಅಖ್ತರ್ ಇಂದು 43ನೇ ವಸಂತಕ್ಕೆ ಕಾಲಿರಿಸಿದ್ದಾರೆ.
ಮಾರಕ ಹಾಗೂ ಕರಾರುವಕ್ಕಾದ ದಾಳಿಯ ಮೂಲಕ ಎದುರಾಳಿ ತಂಡದ ಬ್ಯಾಟ್ಸ್’ಮನ್’ಗಳ ಎದೆಯಲ್ಲಿ ನಡುಕ ಹುಟ್ಟಿಸುತ್ತಿದ್ದ ಅಖ್ತರ್. 2003ರ ವಿಶ್ವಕಪ್ ಟೂರ್ನಿಯಲ್ಲಿ ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ 161.3 ಕಿ.ಮೀ ವೇಗದಲ್ಲಿ ಬೌಲಿಂಗ್ ಮಾಡಿದ್ದು, ಇಂದಿಗೂ ವಿಶ್ವದಾಖಲೆಯಾಗಿಯೇ ಉಳಿದಿದೆ. ವೆಸ್ಟ್’ಇಂಡಿಸ್ ವಿರುದ್ಧ 1997ರಲ್ಲಿ ಅಂತರಾಷ್ಟ್ರೀಯ ಕ್ರಿಕೆಟ್’ಗೆ ಪದಾರ್ಪಣೆ ಮಾಡಿದ ಅಖ್ತರ್ ಒಟ್ಟು ಪಾಕಿಸ್ತಾದ ಪರ ಮೂರು ಮಾದರಿಯ ಕ್ರಿಕೆಟ್’ನಿಂದ 224 ಪಂದ್ಯಗಳನ್ನಾಡಿ 444 ವಿಕೆಟ್ ಕಬಳಿಸಿ ಮಿಂಚಿದ್ದಾರೆ.
ಇನ್ನು ಅಖ್ತರ್ 2008ರ ಐಪಿಎಲ್’ನಲ್ಲಿ ಕೋಲ್ಕತಾ ನೈಟ್’ರೈಡರ್ಸ್ ತಂಡವನ್ನು ಪ್ರತಿನಿಧಿಸಿದ್ದರು. ಹೀಗಿತ್ತು ಅಖ್ತರ್ ಎಸೆದ ಅತಿವೇಗದ ಬೌಲಿಂಗ್..

ಅಖ್ತರ್ ಹುಟ್ಟುಹಬ್ಬಕ್ಕೆ ಟೀಂ ಇಂಡಿಯಾ ಕ್ರಿಕೆಟಿಗ ಹರ್ಭಜನ್ ಸಿಂಗ್ ಸೇರಿದಂತೆ ಹಲವರು ಶುಭಕೋರಿದ್ದಾರೆ.
