ಕರಾಚಿ(ಏ.24): ವಿಶ್ವಕಪ್ ಟೂರ್ನಿಗೆ ತಯಾರಿ ಆರಂಭಗೊಂಡಿದೆ. ಇತ್ತೀಚಗೆ ಪಾಕಿಸ್ತಾನ ವಿಶ್ವಕಪ್ ಟೂರ್ನಿಗೆ ತಂಡ ಪ್ರಕಟಿಸಿದೆ. ಪಾಕ್ ತಂಡ ಆಯ್ಕೆ ಕೂಡ ಚರ್ಚೆಗೆ ಕಾರಣವಾಗಿದೆ. ಇದರ ಬೆನ್ನಲ್ಲೇ ಪಾಕಿಸ್ತಾನ ಮಾಜಿ ವೇಗಿ ಶೋಯಿಬ್  ಅಖ್ತರ್, ಈ ಭಾರಿ ಟ್ರೋಫಿ ಗೆಲ್ಲೋ ನೆಚ್ಚಿನ ತಂಡ ಯಾವುದು ಅನ್ನೋದನ್ನು ಹೇಳಿದ್ದಾರೆ.

ಇದನ್ನೂ ಓದಿ: 2019ರ ವಿಶ್ವಕಪ್ ಫೈನಲ್ ಪ್ರವೇಶಿಸೋ ತಂಡ ಯಾವುದು?- ಭವಿಷ್ಯ ನುಡಿದ ದ್ರಾವಿಡ್!

ತಂಡದ ಆಯ್ಕೆ ಹಾಗೂ ಪ್ರದರ್ಶನ ಗಮನಿಸಿದರೆ ಈ ಬಾರಿ ಆತಿಥೇಯ ಇಂಗ್ಲೆಂಡ್ ವಿಶ್ವಕಪ್ ಗೆಲ್ಲೋ ಸಾಧ್ಯತೆ ಹೆಚ್ಚಿದೆ ಎಂದು  ಅಖ್ತರ್ ಹೇಳಿದ್ದಾರೆ. ನಿಗದಿತ ಓವರ್ ಕ್ರಿಕೆಟ್‌ನಲ್ಲಿ ಇಂಗ್ಲೆಂಡ್ ಬಲಿಷ್ಠ ತಂಡವಾಗಿ ರೂಪುಗೊಂಡಿದೆ. ಜೊತೆಗೆ ತವರಿನ ಲಾಭ ಕೂಡ ಇಂಗ್ಲೆಂಡ್ ತಂಡಕ್ಕಿದೆ. ಹೀಗಾಗಿ ಇಂಗ್ಲೆಂಡ್ ಪ್ರಶಸ್ತಿ ಗೆಲ್ಲಿಲಿದೆ ಎಂದಿದ್ದಾರೆ.

ಇದನ್ನೂ ಓದಿ: ವಿಶ್ವಕಪ್ 2019: ಟೀಂ ಇಂಡಿಯಾಗೆ ಎಚ್ಚರಿಕೆ ನೀಡಿದ ಪಾಕ್!

ಈ ಬಾರಿಯ ವಿಶ್ವಕಪ್ ಟೂರ್ನಿಯಲ್ಲಿ ಪಾಕಿಸ್ತಾನ ಪ್ರಬಲ ಪೈಪೋಟಿ ನೀಡಲಿದೆ. ಪಾಕಿಸ್ತಾನ ಸೆಮಿಫೈನಲ್ ಹಂತದ ವರೆಗೆ ಯಾವುದೇ ಆತಂಕವಿಲ್ಲದೆ ಸಾಗಲಿದೆ ಎಂದು  ಅಖ್ತರ್ ಹೇಳಿದ್ದಾರೆ. ಮೇ. 30 ರಿಂದ ವಿಶ್ವಕಪ್ ಟೂರ್ನಿ ಆರಂಭಗೊಳ್ಳಲಿದೆ.