ಬೆಂಗಳೂರು[ಆ.15]: ನಿರಂತರವಾಗಿ ರನ್ ಗಳಿಸುತ್ತಿದ್ದರೂ ಹಿರಿಯರ ತಂಡದಲ್ಲಿ ಸ್ಥಾನ ನೀಡದ್ದಕ್ಕೆ ಭಾರತ ‘ಎ’ ತಂಡದ ನಾಯಕ ಶ್ರೇಯಸ್ ಅಯ್ಯರ್ ಬಿಸಿಸಿಐ ಆಯ್ಕೆ ಸಮಿತಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. 

‘ಸತತವಾಗಿ ಉತ್ತಮ ಪ್ರದರ್ಶನ ತೋರುತ್ತಿದ್ದರೂ ಅವಕಾಶ ನೀಡದಿದ್ದಾಗ, ತಾಳ್ಮೆಯಿಂದರಲು ಕಷ್ಟವಾಗುತ್ತದೆ. ಆಯ್ಕೆ ಸಮಿತಿ ನಿರ್ಲಕ್ಷ್ಯ ತೋರುತ್ತಿರುವುದು ನನ್ನ ಆಟದ ಮೇಲೆ ಪರಿಣಾಮ ಬೀರುತ್ತಿದೆ’ ಎಂದು ಅಯ್ಯರ್ ಬೇಸರದಿಂದ ಹೇಳಿಕೊಂಡಿದ್ದಾರೆ.

ಕಳೆದ ವರ್ಷ ಭಾರತ ’ಎ’ ಪರ ನ್ಯೂಜಿಲೆಂಡ್ ’ಎ’ ತಂಡದ ವಿರುದ್ಧ 317 ರನ್ ಸಿಡಿಸಿ ಗಮನ ಸೆಳೆದಿದ್ದರು. ಅಲ್ಲದೇ ಈ ಬಾರಿಯ ಐಪಿಎಲ್’ನಲ್ಲೂ ಮಿಂಚಿನ ಪ್ರದರ್ಶನ ತೋರುವಲ್ಲಿ ಯಶಸ್ವಿಯಾಗಿದ್ದರು.