ಸೋನಿಯಾ ಗಾಂಧಿಯವರು 2004ರಿಂದಲೂ ರಾಯ್ ಬರೇಲಿಯಿಂದ ಸ್ಪರ್ಧಿಸುತ್ತಿದ್ದಾರೆ. ಅದೇರೀತಿ 2019ರ ಲೋಕಸಭಾ ಚುನಾವಣೆಯಲ್ಲೂ ಅದೇಕ್ಷೇತ್ರದಿಂದ ಸೋನಿಯಾ ಗಾಂಧಿ ಸ್ಪರ್ಧಿಸಲಿದ್ದಾರೆ ಎಂದು ಪ್ರಿಯಾಂಕ ಹೇಳಿದ್ದಾರೆ.

ನವದೆಹಲಿ(ಡಿ.16): ಮುಂಬರುವ 2019ರ ಲೋಕಸಭಾ ಚುನಾವಣೆಯಲ್ಲಿ ರಾಯ್'ಬರೇಲಿ ಕ್ಷೇತ್ರದಿಂದ ಸೋನಿಯಾ ಗಾಂಧಿ ಅವರೇ ಸ್ಪರ್ಧಿಸಲಿದ್ದಾರೆ ಎಂದು ಪ್ರಿಯಾಂಕಾ ಗಾಂಧಿ ವಾದ್ರಾ ತಿಳಿಸಿದ್ದಾರೆ.

ಈ ಮೂಲಕ ಪಕ್ಷದ ಅಧ್ಯಕ್ಷ ಗಾದಿಯಿಂದ ಕೆಳಗಿಳಿದ ಸೋನಿಯಾ ಗಾಂಧಿ, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ರಾಯ್‌ ಬರೇಲಿ ಕ್ಷೇತ್ರದಿಂದ ಕಣಕ್ಕೆ ಇಳಿಯದೇ ಇರಬಹುದು. ಅವರ ಕ್ಷೇತ್ರದಲ್ಲಿ ಅವರ ಪುತ್ರಿ ಪ್ರಿಯಾಂಕಾ ವಾದ್ರಾ ಕಣಕ್ಕೆ ಇಳಿಯಬಹುದು ಎಂಬ ಊಹಾಪೋಹಗಳಿಗೆ ಸ್ವತಃ ಪ್ರಿಯಾಂಕಾ ಬ್ರೇಕ್ ಹಾಕಿದ್ದಾರೆ.

ಸೋನಿಯಾ ಗಾಂಧಿಯವರು 2004ರಿಂದಲೂ ರಾಯ್ ಬರೇಲಿಯಿಂದ ಸ್ಪರ್ಧಿಸುತ್ತಿದ್ದಾರೆ. ಅದೇರೀತಿ 2019ರ ಲೋಕಸಭಾ ಚುನಾವಣೆಯಲ್ಲೂ ಅದೇಕ್ಷೇತ್ರದಿಂದ ಸೋನಿಯಾ ಗಾಂಧಿ ಸ್ಪರ್ಧಿಸಲಿದ್ದಾರೆ ಎಂದು ಪ್ರಿಯಾಂಕ ಹೇಳಿದ್ದಾರೆ.

ಎಐಸಿಸಿ ಅಧ್ಯಕ್ಷ ಗಾದಿಯಿಂದ ಸೋನಿಯಾ ಗಾಂಧಿ ಚುನಾವಣಾ ಅಖಾಡದಿಂದ ಹಿಂದೆ ಸರಿಯಲಿದ್ದಾರೆ ಎಂಬ ಊಹಾಪೋಹಗಳಿಗೆ ಈ ಮೂಲಕ ಪ್ರಿಯಾಂಕ ಬ್ರೇಕ್ ಹಾಕಿದ್ದಾರೆ.