ಇಂಗ್ಲೆಂಡ್‌'ನಲ್ಲಿ ಜೂನ್ 1ರಿಂದ 18ರವರೆಗೂ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಪಂದ್ಯಾವಳಿಗಳು ನಡೆಯಲಿದೆ.

ದುಬೈ(ಏ.18): ಐಸಿಸಿ ಚಾಂಪಿಯನ್ಸ್ ಟ್ರೋಫಿಗೆ ವೀಕ್ಷಕ ವಿವರಣೆಗಾರರ ಪಟ್ಟಿ ಪ್ರಕಟಗೊಂಡಿದ್ದು, ಭಾರತದ ಮಾಜಿ ನಾಯಕ ಸೌರವ್ ಗಂಗೂಲಿ ಹಾಗೂ ಆಸ್ಟ್ರೇಲಿಯಾದ ರಿಕಿ ಪಾಂಟಿಂಗ್ ಆಯ್ಕೆಯಾಗಿದ್ದಾರೆ.

ಇದೇ ಮೊದಲ ಬಾರಿಗೆ ನ್ಯೂಜಿಲೆಂಡ್‌'ನ ಮಾಜಿ ನಾಯಕ ಬ್ರೆಂಡನ್ ಮೆಕಲಂ, ಶ್ರೀಲಂಕಾದ ಮಾಜಿ ನಾಯಕ ಕುಮಾರ್ ಸಂಗಕ್ಕರ ಹಾಗೂ ದಕ್ಷಿಣ ಆಫ್ರಿಕಾದ ಮಾಜಿ ನಾಯಕ ಗ್ರೇಮ್ ಸ್ಮಿತ್, ಚಾಂಪಿಯನ್ಸ್ ಟ್ರೋಫಿ ವೀಕ್ಷಕ ವಿವರಣೆಗಾರರಾಗುವ ರೇಸ್‌'ನಲ್ಲಿದ್ದರು.

ಇಂಗ್ಲೆಂಡ್‌'ನಲ್ಲಿ ಜೂನ್ 1ರಿಂದ 18ರವರೆಗೂ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಪಂದ್ಯಾವಳಿಗಳು ನಡೆಯಲಿದೆ. ‘‘ನಾನು ಆಟಗಾರನಾಗಿ ಎರಡು ಬಾರಿ ಚಾಂಪಿಯನ್ಸ್ ಟ್ರೋಫಿಯಲ್ಲಿ ಆಡಿದ್ದು, ಈ ಬಾರಿ ವೀಕ್ಷಕ ವಿವರಣೆ ನೀಡಲು ಆಯ್ಕೆಯಾಗಿರುವುದು ಸಂತಸ ತಂದಿದೆ’’ ಎಂದು ಪಾಂಟಿಂಗ್ ಪ್ರತಿಕ್ರಿಯಿಸಿದ್ದಾರೆ.