ಬಿಸಿಸಿಐ ಅಧ್ಯಕ್ಷ ಸ್ಥಾನದಿಂದ ಅನುರಾಗ್ ಠಾಕೂರ್ ವಜಾದಿಂದ ತೆರವಾಗಿರುವ ಸ್ಥಾನಕ್ಕೆ ಟೀಂ ಇಂಡಿಯಾ ಮಾಜಿ ನಾಯಕ ಸೌರವ್ ಗಂಗೂಲಿ ಹೆಸರು ಮುಂಚೂಣಿಯಲ್ಲಿದೆ.

ನವದೆಹಲಿ (ಜ.02): ಬಿಸಿಸಿಐ ಅಧ್ಯಕ್ಷ ಸ್ಥಾನದಿಂದ ಅನುರಾಗ್ ಠಾಕೂರ್ ವಜಾದಿಂದ ತೆರವಾಗಿರುವ ಸ್ಥಾನಕ್ಕೆ ಟೀಂ ಇಂಡಿಯಾ ಮಾಜಿ ನಾಯಕ ಸೌರವ್ ಗಂಗೂಲಿ ಹೆಸರು ಮುಂಚೂಣಿಯಲ್ಲಿದೆ.

ದೆಹಲಿ ಹಾಗೂ ಜಿಲ್ಲಾ ಕ್ರಿಕೆಟ್ ಅಸೋಸಿಯೇಶನ್ (ಡಿಡಿಸಿಎ) ಪಾಧ್ಯಕ್ಷ ಸಿಕೆ ಖನ್ನ ಸೇವಾ ಹಿರಿತನದ ಆಧಾರದ ಮೇಲೆ ಮುಂದಿನ ಬಿಸಿಸಿಐ ಅಧ್ಯಕ್ಷ ಸ್ಥಾನ ಪಟ್ಟಿಯಲ್ಲಿದ್ದಾರೆ. ಕೇಂದ್ರ ವಲಯದಲ್ಲಿ ಸತತ 3 ಬಾರಿ ಉಪಾಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ ಅನುಭವವನ್ನು ಹೊಂದಿರುವ ಖನ್ನಾ ಬಿಸಿಸಿಐ ಪ್ರಬಲ ಆಕಾಂಕ್ಷಿಯಾಗಿದ್ದಾರೆ.

ಸೌರವ್ ಗಂಗೂಲಿ ಅಧ್ಯಕ್ಷರಾದರೆ ಬಿಸಿಸಿಐಗೆ ಇನ್ನಷ್ಟು ಬಲ ಬರುತ್ತದೆ. ಇವರು ಬಹುದೊಡ್ಡ ಪಾತ್ರವನ್ನು ವಹಿಸಲಿದ್ದಾರೆ. ಬಿಸಿಸಿಐನ ಸಮರ್ಥವಾಗಿ ನಡೆಸಿಕೊಂಡು ಹೋಗುತ್ತಾರೆ ಎನ್ನುವವರಲ್ಲಿ ನನಗೆ ಮೊದಲು ನೆನಪಾಗುವ ಹೆಸರು ಸೌರವ್ ಗಂಗೂಲಿ ಎಂದು ಟೀಂ ಇಂಡಿಯಾ ಮಾಜಿ ಕ್ಯಾಪ್ಟನ್ ಸುನೀಲ್ ಗವಾಸ್ಕರ್ ಹೇಳಿದ್ದಾರೆ.