ಸೌರವ್ ಗಂಗೂಲಿ ನಾಯಕತ್ವದಲ್ಲಿ ಟೀಂ ಇಂಡಿಯಾಗೆ ಪದಾರ್ಪಣೆ ಮಾಡಿದ ಜಹೀರ್ ಟೆಸ್ಟ್ ಹಾಗೂ ಏಕದಿನ ಕ್ರಿಕೆಟ್’ನಲ್ಲಿ ದಾದಾ ಮಾರ್ಗದರ್ಶನದಲ್ಲೇ 124 ಪಂದ್ಯಗಳನ್ನಾಡಿ 232 ವಿಕೆಟ್ ಕಬಳಿಸಿದ ಸಾಧನೆ ಮಾಡಿದ್ದಾರೆ. ಜ್ಯಾಕ್ ಹುಟ್ಟುಹಬ್ಬದ ಸಂದರ್ಭದಲ್ಲಿ ದಿಗ್ಗಜ ಕ್ರಿಕೆಟಿಗರು ಜನ್ಮದಿನದ ಶುಭ ಕೋರಿದ್ದಾರೆ.
ನವದೆಹಲಿ[ಅ.07]: ಟೀಂ ಇಂಡಿಯಾದ ಮಾಜಿ ವೇಗದ ಬೌಲರ್ ಜಹೀರ್ ಖಾನ್ ಇಂದು 40ನೇ ವಸಂತಕ್ಕೆ ಕಾಲಿರಿಸಿದ್ದಾರೆ. ಟೀಂ ಇಂಡಿಯಾ ಕ್ರಿಕೆಟ್ ಜಗತ್ತಿಗೆ ಪರಿಚಯಿಸಿದ ಎಡಗೈ ವೇಗಿ ಜಹೀರ್ ಖಾನ್ ಅಂತರಾಷ್ಟ್ರೀಯ ಕ್ರಿಕೆಟ್’ನಲ್ಲಿ 610 ವಿಕೆಟ್ ಕಬಳಿಸಿದ ಸಾಧನೆ ಮಾಡಿದ್ದಾರೆ. ಜಹೀರ್ 200 ಏಕದಿನ, 92 ಟೆಸ್ಟ್ ಹಾಗೂ 17 ಟಿ20 ಅಂತರಾಷ್ಟ್ರೀಯ ಪಂದ್ಯಗಳಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿದ್ದು, ಕ್ರಮವಾಗಿ 282, 311 ಹಾಗೂ 17 ವಿಕೆಟ್ ಕಬಸಿದ್ದಾರೆ.
ಏಕದಿನ ಕ್ರಿಕೆಟ್’ನಲ್ಲಿ ಭಾರತ ಪರ ಅನಿಲ್ ಕುಂಬ್ಳೆ, ಜಾವಗಲ್ ಶ್ರೀನಾಥ್ ಹಾಗೂ ಅಜಿತ್ ಅಗರ್’ಕರ್ ಬಳಿಕ ಅತಿ ಹೆಚ್ಚು ವಿಕೆಟ್ ಪಡೆದ 4ನೇ ಬೌಲರ್ ಎನ್ನುವ ಗೌರವಕ್ಕೆ ಜ್ಯಾಕ್ ಪಾತ್ರರಾಗಿದ್ದಾರೆ. ಇನ್ನು ಟೆಸ್ಟ್ ಕ್ರಿಕೆಟ್’ನಲ್ಲಿ ಕುಂಬ್ಳೆ, ಕಪಿಲ್ ದೇವ್, ಹರ್ಭಜನ್, ಅಶ್ವಿನ್ ಬಳಿಕ ಜ್ಯಾಕ್ 5ನೇ ಸ್ಥಾನದಲ್ಲಿದ್ದಾರೆ.
ಸೌರವ್ ಗಂಗೂಲಿ ನಾಯಕತ್ವದಲ್ಲಿ ಟೀಂ ಇಂಡಿಯಾಗೆ ಪದಾರ್ಪಣೆ ಮಾಡಿದ ಜಹೀರ್ ಟೆಸ್ಟ್ ಹಾಗೂ ಏಕದಿನ ಕ್ರಿಕೆಟ್’ನಲ್ಲಿ ದಾದಾ ಮಾರ್ಗದರ್ಶನದಲ್ಲೇ 124 ಪಂದ್ಯಗಳನ್ನಾಡಿ 232 ವಿಕೆಟ್ ಕಬಳಿಸಿದ ಸಾಧನೆ ಮಾಡಿದ್ದಾರೆ. ಜ್ಯಾಕ್ ಹುಟ್ಟುಹಬ್ಬದ ಸಂದರ್ಭದಲ್ಲಿ ದಿಗ್ಗಜ ಕ್ರಿಕೆಟಿಗರು ಜನ್ಮದಿನದ ಶುಭ ಕೋರಿದ್ದಾರೆ. ಅದರಲ್ಲೂ ಸೌರವ್ ಗಂಗೂಲಿ ಎಡಗೈ ವೇಗಿಗೆ ಹುಟ್ಟು ಹಬ್ಬದ ಶುಭ ಕೋರುವುದರ ಜತೆಗೆ ವಿಶೇಷ ಮನವಿಯನ್ನು ಮಾಡಿಕೊಂಡಿದ್ದಾರೆ. ಏನದು ನೀವೇ ನೋಡಿ..
