ಇನ್ನು ಟೀಂ ಇಂಡಿಯಾ ಮಾಜಿ ನಾಯಕ ಕೇವಲ 46 ರನ್ ಬಾರಿಸಿದರೆ ಏಕದಿನ ಕ್ರಿಕೆಟ್'ನಲ್ಲಿ 10 ಸಾವಿರ ರನ್ ಬಾರಿಸಿದ ಭಾರತದ 4ನೇ ಬ್ಯಾಟ್ಸ್'ಮನ್ ಎನ್ನುವ ಖ್ಯಾತಿಗೆ ಭಾಜನರಾಗಲಿದ್ದಾರೆ.
ಫೋರ್ಟ್'ಎಲಿಜಬೆತ್(ಫೆ.13): ಭಾರತ-ದಕ್ಷಿಣ ಆಫ್ರಿಕಾ ನಡುವಿನ 5ನೇ ಪಂದ್ಯದಲ್ಲಿ ಟಾಸ್ ಗೆದ್ದ ದಕ್ಷಿಣ ಆಫ್ರಿಕಾ ಫೀಲ್ಡಿಂಗ್ ಆಯ್ದುಕೊಂಡಿದೆ. ದಕ್ಷಿಣ ಆಫ್ರಿಕಾ ಒಂದು ಬದಲಾವಣೆಯೊಂದಿಗೆ ಕಣಕ್ಕಿಳಿದರೆ, ಟೀಂ ಇಂಡಿಯಾದಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ.
6 ಪಂದ್ಯಗಳ ಸರಣಿಯಲ್ಲಿ ಈಗಾಗಲೇ 3-1ರ ಅಂತರದಲ್ಲಿ ಮುನ್ನಡೆ ಕಾಯ್ದುಕೊಂಡಿರುವ ಭಾರತ ಈ ಪಂದ್ಯದಲ್ಲಿ ಗೆದ್ದರೆ ಆಫ್ರಿಕಾ ನೆಲದಲ್ಲಿ ಮೊದಲ ಬಾರಿಗೆ ಏಕದಿನ ಸರಣಿ ಗೆದ್ದಂತಾಗುತ್ತದೆ. ದಕ್ಷಿಣ ಆಫ್ರಿಕಾ ತಂಡದಲ್ಲಿ ಒಂದು ಬದಲಾವಣೆ ಮಾಡಲಾಗಿದ್ದು, ಬೆನ್ನು ನೋವಿನಿಂದ ಬಳಲುತ್ತಿರುವ ಕ್ರಿಸ್ ಮೋರಿಸ್ ಬದಲಿಗೆ ತಬರೀಜ್ ಸಂಶಿ ಸ್ಥಾನ ಪಡೆದಿದ್ದಾರೆ.
ಈ ಮೈದಾನದಲ್ಲಿ ಭಾರತ ಒಮ್ಮೆಯು ಜಯದ ಸಿಹಿಯುಂಡಿಲ್ಲ. ವಿರಾಟ್ ಕೊಹ್ಲಿ ಪಡೆ ಈ ನೆಲದಲ್ಲಿ ಗೆಲುವಿನ ಬರ ನೀಗಿಸುತ್ತಾ ಕಾದುನೋಡಬೇಕಿದೆ.
ಇನ್ನು ಟೀಂ ಇಂಡಿಯಾ ಮಾಜಿ ನಾಯಕ ಕೇವಲ 46 ರನ್ ಬಾರಿಸಿದರೆ ಏಕದಿನ ಕ್ರಿಕೆಟ್'ನಲ್ಲಿ 10 ಸಾವಿರ ರನ್ ಬಾರಿಸಿದ ಭಾರತದ 4ನೇ ಬ್ಯಾಟ್ಸ್'ಮನ್ ಎನ್ನುವ ಖ್ಯಾತಿಗೆ ಭಾಜನರಾಗಲಿದ್ದಾರೆ.