ಬೆಂಗಳೂರು[ನ.07]: ಬೆಳಕಿನ ಹಬ್ಬ ದೀಪಾವಳಿಯನ್ನು ದೇಶದಾದ್ಯಂತ ಅತ್ಯಂತ ಸಡಗರ ಸಂಭ್ರಮದಿಂದ ಆಚರಿಸಲಾಗುತ್ತಿದೆ. ಈ ಶುಭ ಸಂದರ್ಭದಲ್ಲಿ ದೇಶದ ಕ್ರೀಡಾತಾರೆಗಳು ದೇಶದ ಜನತೆಗೆ ಟ್ವಿಟರ್ ಮೂಲಕ ಶುಭ ಕೋರಿದ್ದಾರೆ.

ಟೀಂ ಇಂಡಿಯಾ ವೆಸ್ಟ್ ಇಂಡೀಸ್ ತಂಡವನ್ನು ಅನಾಯಾಸವಾಗಿ ಮಣಿಸಿ ಸರಣಿ ಗೆಲ್ಲುವ ಮೂಲಕ ದೇಶದ ಜನತೆಗೆ ದೀಪಾವಳಿಯ ಉಡುಗೊರೆ ನೀಡಿದೆ. ಇದೇ ಸಂದರ್ಭದಲ್ಲಿ ಕ್ರೀಡಾತಾರೆಗಳು ದೇಶದ ಜನತೆಗೆ ದೀಪಾವಳಿ ಹಬ್ಬದ ಶುಭ ಕೋರಿದ್ದು ಹೀಗೆ..