ರಾಷ್ಟ್ರ ರಾಜಕಾರಣದಲ್ಲಿ ತನ್ನದೇ ಛಾಪು ಮೂಡಿಸಿದ್ದ ಧೀಮಂತ ನಾಯಕ, ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಇಂದು ಸಂಜೆ ಇಹಲೋಕ ತ್ಯಜಿಸಿದ್ದಾರೆ. ಕವಿಹೃದಯಿ, ಕ್ರೀಡಾ ಪ್ರೇಮಿಯೂ ಆಗಿದ್ದ ಅಟಲ್ ಅವರ ಅಗಲಿಕೆಗೆ ಇಡೀ ದೇಶವೇ ಕಂಬನಿ ಮಿಡಿಯುತ್ತಿದೆ. 

ಕಳೆದ ತಿಂಗಳು ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ ಅಟಲ್‌ಜೀ ಅವರು ವಯೋ ಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು. ಕಿಡ್ನಿ ಸೋಂಕು ಹಾಗೂ ಎದೆ ಹಿಡಿತದಿಂದ ಕೊನೆಯುಸಿರೆಳೆದಿದ್ದಾರೆ. ಅಟಲ್ ಅಗಲಿಕೆ ಕ್ರೀಡಾ ಕ್ಷೇತ್ರದ ದಿಗ್ಗಜರೂ ಕಂಬನಿ ಮಿಡಿದಿದ್ದಾರೆ. ಅದರಲ್ಲೂ ಕೈಫ್ ಅಪರೋಪದ ಕ್ಷಣವನ್ನು ಟ್ವೀಟ್ ಮೂಲಕ ಹಂಚಿಕೊಂಡಿದ್ದಾರೆ.