ಇಂದಿನ ಪಂದ್ಯ ರದ್ದಾದರೆ, ಗ್ರೂಪ್ ಹಂತದಲ್ಲಿ ಅಗ್ರಸ್ಥಾನ ಪಡೆದ ತಂಡ ಎರಡನೇ ಕ್ವಾಲಿಫೈಯರ್ ಪಂದ್ಯ ಆಡಲಿದೆ.

ಬೆಂಗಳೂರು(ಮೇ.17): ಮುಂಬೈ ಇಂಡಿಯನ್ಸ್ ವಿರುದ್ಧ ಭರ್ಜರಿ ಜಯ ಸಾಧಿಸಿದ ರೈಸಿಂಗ್ ಪುಣೆ ಸೂಪರ್'ಜೈಂಟ್ ತಂಡ 10ನೇ ಆವೃತ್ತಿಯಲ್ಲಿ ಫೈನಲ್ ಪ್ರವೇಶಿಸಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಇದೀಗ ಎಲಿಮಿನೇಟರ್ ಪಂದ್ಯವು ಇಂದು ಬೆಂಗಳೂರಿನಲ್ಲಿ ನಡೆಯಲಿದ್ದು, ಕೋಲ್ಕತ ನೈಟ್'ರೈಡರ್ಸ್ ಹಾಗೂ ಹಾಲಿ ಚಾಂಪಿಯನ್ ಸನ್'ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾಗಲಿವೆ. ಈ ಪಂದ್ಯದಲ್ಲಿ ವಿಜೇತವಾದ ತಂಡವು ಮುಂಬೈ ಇಂಡಿಯನ್ಸ್ ಎದುರು ಸೆಣಸಲಿದೆ.

ಇದೀಗ ಹೊಸ ವಿಷ್ಯಾ ಏನಪ್ಪಾ ಅಂದ್ರೆ, ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಪಂದ್ಯಕ್ಕೆ ಮಳೆಯ ಭೀತಿ ಎದುರಾಗಿದೆ. ಈಗಾಗಲೇ ಬೆಂಗಳೂರಿನಲ್ಲಿ ಮಳೆಯಿಂದ ಪಂದ್ಯ ರದ್ದಾಗಿದ್ದನ್ನು ನೋಡಿದ್ದೇವೆ. ಹಾಗಾಗಿ ಇಂದೇನಾದರು ಪಂದ್ಯ ರದ್ದಾದರೆ ಏನಾಗಬಹುದು ಎಂದು ಯೋಚಿಸುತ್ತಿದ್ದರೆ ಇಲ್ಲಿದೆ ನೋಡಿ ಉತ್ತರ...

Scroll to load tweet…

ಇಂದಿನ ಪಂದ್ಯ ರದ್ದಾದರೆ, ಗ್ರೂಪ್ ಹಂತದಲ್ಲಿ ಅಗ್ರಸ್ಥಾನ ಪಡೆದ ತಂಡ ಎರಡನೇ ಕ್ವಾಲಿಫೈಯರ್ ಪಂದ್ಯ ಆಡಲಿದೆ. ಅಂದರೆ ಸನ್'ರೈಸರ್ಸ್ ಹೈದರಾಬಾದ್ ತಂಡ ಮುಂಬೈ ತಂಡದೆದುರು ಮುಖಾಮುಖಿಯಾಗಲಿದೆ.