ಕೆಳಕ್ರಮಾಂಕದಲ್ಲಿ ಬ್ಯಾಟಿಂಗ್ ವೈಫಲ್ಯ ಅನುಭವಿಸಿದ ಆರ್'ಸಿಬಿ 172 ರನ್'ಗಳಿಗೆ ಸರ್ವಪತನ ಕಂಡಿತು. ಈ ಮೂಲಕ ಸನ್'ರೈಸರ್ಸ್ ಹೈದರಾಬಾದ್ ತಂಡ 35 ರನ್'ಗಳ ಜಯಭೇರಿ ಬಾರಿಸಿತು.

ಹೈದರಾಬಾದ್(ಏ.5): ಬ್ಯಾಟಿಂಗ್ ಹಾಗೂ ಬೌಲಿಂಗ್'ನಲ್ಲಿ ಸಂಘಟಿತ ಪ್ರದರ್ಶನ ನೀಡಿದ ಹಾಲಿ ಚಾಂಪಿಯನ್ ಸನ್ ರೈಸರ್ಸ್ ಹೈದರಾಬಾದ್ 35 ರನ್'ಗಳ ಭರ್ಜರಿ ಜಯಭೇರಿ ಬಾರಿಸಿದೆ.

ಇಲ್ಲಿನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಮೈದಾನದಲ್ಲಿ ನಡೆದ ಐಪಿಎಲ್ 10ನೇ ಆವೃತ್ತಿಯ ಉದ್ಘಾಟನಾ ಪಂದ್ಯದಲ್ಲಿ ಡೇವಿಡ್ ವಾರ್ನರ್ ನೇತೃತ್ವದ ಸನ್ ರೈಸರ್ಸ್ ಹೈದರಾಬಾದ್ ಟಾಸ್ ಸೋತರು ಮೊದಲು ಬ್ಯಾಟಿಂಗ್ ಮಾಡಲು ಇಳಿಯಿತು. ಆರಂಭಿಕ ಆಟಗಾರ ಶಿಖರ್ ಧವನ್(40), ಮೋಯಿಸ್ ಹೆನ್ರಿಕೇಸ್(52) ಹಾಗೂ ಯುವರಾಜ್ ಸಿಂಗ್(62) ಸ್ಪೋಟಕ ಬ್ಯಾಟಿಂಗ್ ನೆರವಿನಿಂದ ನಾಲ್ಕು ವಿಕೆಟ್ ನಷ್ಟಕ್ಕೆ 207 ರನ್ ಕಲೆಹಾಕಿತು.

ಬೃಹತ್ ಮೊತ್ತ ಬೆನ್ನತ್ತಿದ ಆರ್'ಸಿಬಿ ಉತ್ತಮ ಆರಂಭವನ್ನೇ ಪಡೆಯಿತು. ಮೊದಲ ವಿಕೆಟ್'ಗೆ ಕ್ರಿಸ್ ಗೇಲ್ ಮತ್ತು ಮನ್ದೀಪ್ ಸಿಂಗ್ 52ರನ್'ಗಳ ಜತೆಯಾಟವಾಡಿದರು. ಕ್ರಿಸ್ ಗೇಲ್, ತ್ರಿವೀಸ್ ಹೆಡ್, ಕೇದರ್ ಜಾಧವ್ ಉತ್ತಮವಾಗಿ ರನ್ ಕಲೆಹಾಕಿದರೂ ಅವರ ಹೋರಾಟ ತಂಡವನ್ನು ಗೆಲುವಿನ ದಡ ಸೇರಿಸಲು ಸಾಧ್ಯವಾಗಲಿಲ್ಲ. ಕೆಳಕ್ರಮಾಂಕದಲ್ಲಿ ಬ್ಯಾಟಿಂಗ್ ವೈಫಲ್ಯ ಅನುಭವಿಸಿದ ಆರ್'ಸಿಬಿ 172 ರನ್'ಗಳಿಗೆ ಸರ್ವಪತನ ಕಂಡಿತು. ಈ ಮೂಲಕ ಸನ್'ರೈಸರ್ಸ್ ಹೈದರಾಬಾದ್ ತಂಡ 35 ರನ್'ಗಳ ಜಯಭೇರಿ ಬಾರಿಸಿತು. ಕ್ಷೇತ್ರ ರಕ್ಷಣೆಯಲ್ಲಿ ಕಳಪೆ ಪ್ರದರ್ಶನ ತೋರಿದ ಆರ್'ಸಿಬಿ ಕೊನೆಗೂ ಅದಕ್ಕೆ ತಕ್ಕ ಬೆಲೆತೆರಬೇಕಾ

ಸನ್'ರೈಸರ್ಸ್ ಪರ ಅನುಭವಿ ಬೌಲರ್ ಆಶೀಸ್ ನೆಹ್ರಾ, ಭುನೇಶ್ವರ್ ಕುಮಾರ್, ರಶೀದ್ ಖಾನ್ ತಲಾ 2 ವಿಕೆಟ್ ಪಡೆದು ಗೆಲುವಿನ ರೂವಾರಿಗಳೆನಿಸಿಕೊಂಡರು.