ಲಂಕಾ ತಂಡದ ನಾಯಕ ಏಂಜಲೋ ಮ್ಯಾಥ್ಯೂಸ್ ಗಾಯಗೊಂಡಿರುವ ಹಿನ್ನೆಲೆಯಲ್ಲಿ ಜಿಂಬಾಬ್ವೆ ವಿರುದ್ಧ ನಡೆಯಲಿರುವ ಎರಡು ಟೆಸ್ಟ್ ಪಂದ್ಯಗಳ ಸರಣಿಗೆ ಹೆರಾತ್ ನಾಯಕತ್ವವನ್ನು ವಹಿಸಲಿದ್ದಾರೆ.

ಕೊಲಂಬೊ(ಅ.26): ಶ್ರೀಲಂಕಾ ತಂಡದ ಅನುಭವಿ ಸ್ಪಿನ್ನರ್ ರಂಗನಾ ಹೆರಾತ್ ಲಂಕಾ ತಂಡದ ನಾಯಕರಾಗಿದ್ದಾರೆ. ಆದರೆ ಅವರು ಪೂರ್ಣ ಪ್ರಮಾಣದ ನಾಯಕರಾಗಿಲ್ಲ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಲಂಕಾ ತಂಡದ ನಾಯಕ ಏಂಜಲೋ ಮ್ಯಾಥ್ಯೂಸ್ ಗಾಯಗೊಂಡಿರುವ ಹಿನ್ನೆಲೆಯಲ್ಲಿ ಜಿಂಬಾಬ್ವೆ ವಿರುದ್ಧ ನಡೆಯಲಿರುವ ಎರಡು ಟೆಸ್ಟ್ ಪಂದ್ಯಗಳ ಸರಣಿಗೆ ಹೆರಾತ್ ನಾಯಕತ್ವವನ್ನು ವಹಿಸಲಿದ್ದಾರೆ.

ಸೀಮಿತ ಓವರ್'ಗಳ ಕ್ರಿಕೆಟ್'ಗೆ ಈಗಾಗಲೇ ನಿವೃತ್ತಿ ಘೋಷಿಸಿರುವ 38 ವರ್ಷದ ಹೆರಾತ್, ತಾವಾಡುತ್ತಿರುವ 74 ನೇ ಪಂದ್ಯದಲ್ಲಿ ನಾಯಕನಾಗಿ ತಂಡವನ್ನು ಮುನ್ನೆಡೆಸಲಿದ್ದಾರೆ.

ಹೆರಾತ್ ಇಲ್ಲಿಯವರೆಗೆ 71 ಏಕದಿನ, 17 ಟಿ-20 ಬಾರಿ ಶ್ರೀಲಂಕಾ ತಂಡವನ್ನು ಪ್ರತಿನಿಧಿಸಿದ್ದಾರೆ.