ಪ್ರಸ್ತುತ ನಡೆಯುತ್ತಿರುವ ಭಾರತ ವಿರುದ್ಧದ ಸರಣಿ ಹಾಗೂ ಇದಕ್ಕೂ ಮುನ್ನಾ ನಡೆದಿದ್ದ ಜಿಂಬಾಬ್ವೆ ವಿರುದ್ಧದ ಸರಣಿಯಲ್ಲಿ ಹೀನಾಯ ಪ್ರದರ್ಶನ ನೀಡಿದ ಪರಿಣಾಮ ಲಂಕಾ ತಂಡ ಸಾಕಷ್ಟು ಟೀಕೆಗೆ ಗುರಿಯಾಗಿದೆ.
ಕೊಲಂಬೊ(ಆ.30): ಜಯಸೂರ್ಯ ನೇತೃತ್ವದ ಶ್ರೀಲಂಕಾ ಕ್ರಿಕೆಟ್ ಆಯ್ಕೆ ಸಮಿತಿಯ ಸದಸ್ಯರೆಲ್ಲರೂ ತಮ್ಮ ಸ್ಥಾನಗಳಿಗೆ ರಾಜೀನಾಮೆ ಸಲ್ಲಿಸಿದ್ದಾರೆ. ಪ್ರಸ್ತುತ ನಡೆಯುತ್ತಿರುವ ಭಾರತ ವಿರುದ್ಧದ ಸರಣಿ ಹಾಗೂ ಇದಕ್ಕೂ ಮುನ್ನಾ ನಡೆದಿದ್ದ ಜಿಂಬಾಬ್ವೆ ವಿರುದ್ಧದ ಸರಣಿಯಲ್ಲಿ ಹೀನಾಯ ಪ್ರದರ್ಶನ ನೀಡಿದ ಪರಿಣಾಮ ಲಂಕಾ ತಂಡ ಸಾಕಷ್ಟು ಟೀಕೆಗೆ ಗುರಿಯಾಗಿದೆ.
ಈ ಹಿನ್ನೆಲೆಯಲ್ಲಿ ಲಂಕಾ ಆಯ್ಕೆ ಸಮಿತಿ ಮುಖ್ಯಸ್ಥರಾದ ಸನತ್ ಜಯಸೂರ್ಯ, ಉಳಿದ ಸದಸ್ಯರಾದ ರಂಜಿತ್ ಮದುರಸಿಂಘೆ, ರಮೇಶ್ ಕಲುವಿತರಣ, ಅಸಾಂಕ ಗುರುಸಿನ್ಹಾ, ಎರಿಕ್ ಉಪಶಾಂತ ನೈತಿಕ ಹೊಣೆ ಹೊತ್ತು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ ಎಂದು ಲಂಕಾದ ಕ್ರೀಡಾ ಇಲಾಖೆ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ. ಆದರೆ, ಶ್ರೀಲಂಕಾ ಕ್ರಿಕೆಟ್ ಮಂಡಳಿ ಮಂಗಳವಾರ ಸಂಜೆ ತನಕ ಅಧಿಕೃತವಾಗಿ ಇನ್ನೂ ರಾಜೀನಾಮೆ ಸ್ವೀಕರಿಸಿಲ್ಲ ಎಂದಿದೆ.
