ಡಬರ್ನ್(ಫೆ.23): ಸೌತ್ಆಫ್ರಿಕಾ ಪ್ರವಾಸದಲ್ಲಿರುವ ಶ್ರೀಲಂಕಾ ಐತಿಹಾಸಿಕ ಸಾಧನೆ ಮಾಡಿದೆ. ಇದುವರೆಗೆ ಭಾರತದಂತ ಬಲಿಷ್ಠ ಏಷ್ಯಾ ತಂಡಗಳಿಗೆ ಸಾಧ್ಯವಾಗದೆ ದಾಖಲೆನ್ನು ಶ್ರೀಲಂಕಾ ಮಾಡಿದೆ. ಸೌತ್ಆಫ್ರಿಕಾ ವಿರುದ್ಧದ 2 ಟೆಸ್ಟ್ ಪಂದ್ಯಗಳ ಸರಣಿಯನ್ನು 2-0 ಅಂತರದಲ್ಲಿ ಗೆದ್ದುಕೊಂಡಿದೆ. ಈ ಮೂಲಕ ಇದೇ ಮೊದಲ ಬಾರಿಗೆ ಸೌತ್ಆಫ್ರಿಕಾ ನೆಲದಲ್ಲಿ ಟೆಸ್ಟ್ ಸರಣಿ ಗೆಲುವು ದಾಖಲಿಸಿದೆ ಏಷ್ಯಾ ತಂಡ ಅನ್ನೋ ಹೆಗ್ಗಳಿಕೆಗೆ ಪಾತ್ರವಾಗಿದೆ.

ಇದನ್ನೂ ಓದಿ: ಪಾಕ್ ವಿರುದ್ಧ ವಿಶ್ವಕಪ್: ಕೊನೆಗೂ ತುಟಿಬಿಚ್ಚಿದ ವಿರಾಟ್ ಕೊಹ್ಲಿ

ದ್ವಿತೀಯ ಟೆಸ್ಟ್ ಪಂದ್ಯದಲ್ಲೂ ಅದ್ಬುತ ಪ್ರದರ್ಶನ ನೀಡಿದ ಶ್ರೀಲಂಕಾ ಇತಿಹಾಸ ರಚಿಸಿದೆ. ಮೊದಲ ಇನ್ನಿಂಗ್ಸ್‌ನಲ್ಲಿ ಸೌತ್ಆಫ್ರಿಕಾ 222 ರನ್ ಸಿಡಿಸಿ ಆಲೌಟ್ ಆಗಿತ್ತು. ಇದಕ್ಕುತ್ತರವಾಗಿ ಇನ್ನಿಂಗ್ಸ್ ಆರಂಭಿಸ ಶ್ರೀಲಂಕಾ ಕೇವಲ 154 ರನ್‌ಗೆ ಆಲೌಟ್ ಆಗೋ ಮೂಲಕ ಭಾರಿ ಹಿನ್ನಡೆ ಅನುಭವಿಸಿತ್ತು. ಭರ್ಜರಿ ಮುನ್ನಡೆ ಪಡೆದ ಆತಿಥೇಯ ಸೌತ್ಆಫ್ರಿಕಾ ಗೆಲುವಿನ ವಿಶ್ವಾಸದಲ್ಲಿತು.

ಇದನ್ನೂ ಓದಿ: ವಿಶ್ವದ ಅತೀ ದೊಡ್ಡ ವಿಮಾನ ಹಾರಿಸಿದ ಆಸ್ಟ್ರೇಲಿಯಾ ಕ್ರಿಕೆಟಿಗ-ವಿಡಿಯೋ ವೈರಲ್!

ದ್ವಿತೀಯ ಇನ್ನಿಂಗ್ಸ್‌ನಲ್ಲಿ ಸೌತ್ಆಫ್ರಿಕಾ 128 ರನ್‌ಗೆ ಆಲೌಟ್ ಆಯಿತು. ಈ ಮೂಲಕ ಲಂಕಾ ಗೆಲುವಿಗೆ 197 ರನ್ ಟಾರ್ಗೆಟ್ ನೀಡಿತು. ಈ ಗುರಿ ಬೆನ್ನಟ್ಟಿದ ಲಂಕಾ ಕೇವಲ 2 ವಿಕೆಟ್ ಕಳೆದುಕೊಂಡು ಗೆಲುವು ಸಾಧಿಸಿತು. ದ್ವಿತೀಯ ಪಂದ್ಯದಲ್ಲಿ 8 ವಿಕೆಟ್ ಗೆಲುವು ಸಾಧಿಸಿದ ಲಂಕಾ, ಮೊದಲ ಪಂದ್ಯದಲ್ಲಿ 1 ವಿಕೆಟ್ ಗೆಲುವು ದಾಖಲಿಸಿತ್ತು. ಈ ಮೂಲಕ 2-0 ಅಂತರದಲ್ಲಿ ಸರಣಿ ವಶಪಡಿಸಿಕೊಂಡಿತು.