ಏಷ್ಯಾಕಪ್ ಟೂರ್ನಿ ಆರಂಭಗೊಂಡಿದೆ. ಟೂರ್ನಿಯ ಉದ್ಘಾಟನೆಗೊಂಡ ಬೆನ್ನಲ್ಲೇ, ಪ್ರತಿಷ್ಠಿತ ಟೂರ್ನಿ ಗೆಲ್ಲೋ ನೆಚ್ಚಿನ ತಂಡ ಯಾವುದು ಅನ್ನೋ ಚರ್ಚೆ ಶುರುವಾಗಿದೆ. ಟೀಂ ಇಂಡಿಯಾ ಮಾಜಿ ನಾಯಕ ಈ ಬಾರಿಯ ಏಷ್ಯಾಕಪ್ ಗೆಲ್ಲೋ ತಂಡ ಯಾವುದು ಅನ್ನೋ ಭವಿಷ್ಯ ನುಡಿದಿದ್ದಾರೆ.

ದುಬೈ(ಸೆ.15): ಏಷ್ಯಾ ಕ್ರಿಕೆಟ್ ರಾಷ್ಟ್ರಗಳ ಪ್ರತಿಷ್ಠಿತ ಏಷ್ಯಾಕಪ್ ಟೂರ್ನಿ ಆರಂಭಗೊಂಡಿದೆ. ಮೊದಲ ಪಂದ್ಯದಲ್ಲಿ ಬಾಂಗ್ಲಾದೇಶ ಹಾಗೂ ಶ್ರೀಲಂಕಾ ಹೋರಾಟ ನಡೆಸುತ್ತಿದೆ. ಟೂರ್ನಿ ಆರಂಭದ ಬೆನ್ನಲ್ಲೇ ಪ್ರಶಸ್ತಿ ಗೆಲ್ಲೋ ನೆಚ್ಚಿನ ತಂಡ ಯಾವುದು ಅನ್ನೋ ಚರ್ಚೆ ಶುರುವಾಗಿದೆ.

Add Asianetnews Kannada as a Preferred SourcegooglePreferred

ಟೀಂ ಇಂಡಿಯಾ ಮಾಜಿ ನಾಯಕ ಸುನಿಲ್ ಗವಾಸ್ಕರ್ ಈ ಬಾರಿಯ ಏಷ್ಯಾಕಪ್ ಟೂರ್ನಿ ಗೆಲ್ಲೋ ನೆಚ್ಚಿನ ತಂಡ ಯಾವುದು ಅನ್ನೋ ಭವಿಷ್ಯ ಹೇಳಿದ್ದಾರೆ. ತಂಡದ ಇತ್ತೀಚಿನ ಪ್ರದರ್ಶನ, ಕಂಡೀಷನ್ ಎಲ್ಲವನ್ನ ಪರಿಗಣಿಸಿದರೆ ಪಾಕಿಸ್ತಾನ ಈ ಬಾರಿಯ ಏಷ್ಯಾಕಪ್ ಗೆಲ್ಲಲಿದೆ ಎಂದು ಗವಾಸ್ಕರ್ ಹೇಳಿದ್ದಾರೆ.

2017ರ ಚಾಂಪಿಯನ್ಸ್ ಟ್ರೋಫಿ ಫೈನಲ್ ಪಂದ್ಯದಲ್ಲಿ ಭಾರತ ತಂಡವನ್ನ ಮಣಿಸಿ ಪ್ರಶಸ್ತಿ ಗೆದ್ದ ಪಾಕಿಸ್ತಾನ ಬಲಿಷ್ಠ ತಂಡವಾಗಿ ರೂಪುಗೊಂಡಿದೆ. ಇಷ್ಟೇ ಅಲ್ಲ ದುಬೈ ಅಂತಾರಾಷ್ಟ್ರೀಯ ಕ್ರೀಡಾಂಗಣ ಪಾಕಿಸ್ತಾನ ತಂಡದ ತವರು. ಹೀಗಾಗಿ ಪಾಕಿಸ್ತಾನವೇ ಏಷ್ಯಾಕಪ್ ಗೆಲ್ಲೋ ಫೇವರಿಟ್ ತಂಡ ಎಂದಿದ್ದಾರೆ.

ಟೀಂ ಇಂಡಿಯಾ ಬಲಿಷ್ಠ ತಂಡ ಅನ್ನೋದರಲ್ಲಿ ಎರಡು ಮಾತಿಲ್ಲ. ಆದರೆ ಇತ್ತೀಚಿನ ಪ್ರದರ್ಶನ ಭಾರತಕ್ಕೆ ಪೂರಕವಾಗಿಲ್ಲ. ಜೊತೆಗೆ ನಾಯಕ ವಿರಾಟ್ ಕೊಹ್ಲಿ ಅನುಪಸ್ಥಿತಿ ಕೂಡ ಟೀಂ ಇಂಡಿಯಾಗೆ ಕಾಡಲಿದೆ ಎಂದು ಗವಾಸ್ಕರ್ ಹೇಳಿದ್ದಾರೆ.