ಸನ್‌ರೈಸರ್ಸ್ ಹೈದರಾಬಾದ್ ತಂಡದ ಸಂಘಟಿತ ಪ್ರದರ್ಶನದ ನೆರವಿನಿಂದ ಮುಂಬೈ ವಿರುದ್ಧ 1 ವಿಕೆಟ್‌ ಭರ್ಜರಿ ಜಯ ಸಾಧಿಸಿದೆ.
ಹೈದರಾಬಾದ್: ಸನ್ರೈಸರ್ಸ್ ಹೈದರಾಬಾದ್ ತಂಡದ ಸಂಘಟಿತ ಪ್ರದರ್ಶನದ ನೆರವಿನಿಂದ ಮುಂಬೈ ವಿರುದ್ಧ 1 ವಿಕೆಟ್ ಭರ್ಜರಿ ಜಯ ಸಾಧಿಸಿದೆ.
ಮುಂಬೈ ಇಂಡಿಯನ್ಸ್ ನೀಡಿದ್ದ ಸುಲಭ ಗುರಿ ಬೆನ್ನತ್ತಿದ ಹೈದರಾಬಾದ್ ಉತ್ತಮ ಆರಂಭವನ್ನೇ ಪಡೆಯಿತು. ಮೊದಲ ವಿಕೆಟ್ಗೆ 62 ರನ್ ಕಲೆ ಹಾಕಿತು. ವಿಕೆಟ್ ಕೀಪರ್ ಬ್ಯಾಟ್ಸ್ಮನ್ ವೃದ್ದಿಮಾನ್ ಸಾಹ 22 ರನ್ ಗಳಿಸಿ ಮಾರ್ಕಂಡೆ ಬೌಲಿಂಗ್ನಲ್ಲಿ ಎಲ್'ಬಿ ಬಲೆಗೆ ಬಿದ್ದರು. ಇನ್ನು ಸ್ಪೋಟಕ ಬ್ಯಾಟಿಂಗ್ ನಡೆಸಿದ ಧವನ್ ಕೇವಲ 28 ಎಸೆತಗಳಲ್ಲಿ 8 ಬೌಂಡರಿಗಳ ನೆರವಿನೊಂದಿಗೆ 45 ರನ್ ಸಿಡಿಸಿ ಮಾರ್ಕಂಡೇಯ ಬಲೆಗೆ ಬಿದ್ದರು. ನಾಯಕ ಕೇನ್ ವಿಲಿಯಮ್ಸನ್ ಕೇವಲ 6 ರನ್ ಸಿಡಿಸಿ ನಿರಾಸೆ ಮೂಡಿಸಿದರು. ಮಧ್ಯಮ ಕ್ರಮಾಂಕದಲ್ಲಿ ಪಾಂಡೆ(11) ಹಾಗೂ ಶಕೀಬ್ ಅಲ್ ಹಸನ್(12) ಕೂಡಾ ಹೆಚ್ಚುಹೊತ್ತು ಕ್ರಿಸ್ನಲ್ಲಿ ನಿಲ್ಲಲ್ಲಿಲ್ಲ.
ಕೊನೆಯಲ್ಲಿ ದೀಪಕ್ ಹೂಡಾ ಬಾರಿಸಿದ ಉಪಯುಕ್ತ ೩೨ ರನ್ ಗಳ ನೆರವಿನಿಂದ ಸನ್ ರೈಸರ್ಸ್ ರೋಚಕ ಜಯ ಸಾಧಿಸಿತು.
ಇದಕ್ಕೂ ಮೊದಲು ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಮುಂಬೈ ಲೆವಿಸ್, ಸೂರ್ಯಕುಮಾರ್ ಯಾದವ್ ಹಾಗೂ ಪೊಲ್ಲಾರ್ಡ್ ಬ್ಯಾಟಿಂಗ್ ನೆರವಿನಿಂದ 8 ವಿಕೆಟ್ ನಷ್ಟಕ್ಕೆ 147 ರನ್ ಗಳಿಸಿತ್ತು.
