ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿಗೆ ಆಯ್ಕೆ ಮಾಡಿರುವ ಟೀಂ ಇಂಡಿಯಾದಲ್ಲಿ ಸುರೇಶ್ ರೈನಾಗೆ ಸ್ಥಾನ ಕಲ್ಪಿಸಿಲ್ಲ. ಎಂ.ಎಸ್.ಕೆ ಪ್ರಸಾದ್ ನೇತೃತ್ವದ ಆಯ್ಕೆ ಸಮಿತಿ ವಿರುದ್ಧ ಇದೀಗ ಟ್ವಿಟರಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮುಂಬೈ(ಡಿ.24): ಆಸ್ಟ್ರೇಲಿಯಾ ವಿರುದ್ಧ ಟಸ್ಟ್ ಸರಣಿ ಬೆನ್ನಲ್ಲೇ ಇದೀಗ ನ್ಯೂಜಿಲೆಂಡ್ ವಿರುದ್ದದ ಸರಣಿಗೂ ಟೀಂ ಇಂಡಿಯಾ ಪ್ರಕಟಿಸಲಾಗಿದೆ. ಆಸಿಸ್ ವಿರುದ್ದ ಏಕದಿನ ಸರಣಿ ಬಳಿಕ ಟೀಂ ಇಂಡಿಯಾ ನೇರವಾಗಿ ನ್ಯೂಜಿಲೆಂಡ್ ಪ್ರವಾಸ ಮಾಡಲಿದೆ. ಕಿವಿಸ್ ವಿರುದ್ದ 5 ಏಕದಿನ ಹಾಗೂ 3 ಟಿ20 ಪಂದ್ಯ ಆಡಲಿದೆ.
ನ್ಯೂಜಿಲೆಂಡ್ ವಿರುದ್ಧದ 3 ಪಂದ್ಯದ ಟಿ20 ಸರಣಿಗೆ ಟೀಂ ಇಂಡಿಯಾ ಆಯ್ಕೆ ಮಾಡಲಾಗಿದೆ. ಆದರೆ ಮಧ್ಯಮ ಕ್ರಮಾಂಕ ಬ್ಯಾಟ್ಸ್‌ಮನ್ ಸುರೇಶ್ ರೈನಾಗೆ ಅವಕಾಶ ನೀಡಬೇಕಿತ್ತು ಅನ್ನೋ ಕೂಗು ಕೇಳಿಬಂದಿದೆ. ಚುಟುಕು ಸರಣಿಗೆ ಆಯ್ಕೆ ಮಾಡಿರೋ ತಂಡದಲ್ಲಿ ರೈನಾಗೆ ಅವಕಾಶ ನೀಡಿಲ್ಲ. ಹೀಗಾಗಿ ಟ್ವಿಟರಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
