ಟೀಂ ಇಂಡಿಯಾ ಮಿಡ್ಲ್ ಆರ್ಡರ್ ಬ್ಯಾಟ್ಸ್‌ಮನ್ ಸುರೇಶ್ ರೈನಾಗೆ ಇಂದು ಹುಟ್ಟು ಹಬ್ಬದ ಸಂಭ್ರಮ. ರೈನಾ ಬರ್ತ್‌ಡೇಗೆ ಸಚಿನ್ ತೆಂಡೂಲ್ಕರ್, ವಿರೇಂದ್ರ ಸೆಹ್ವಾಗ್ ಸೇರಿದಂತೆ ದಿಗ್ಗಜ ಕ್ರಿಕೆಟಿಗರು ಶುಭಾಶಯ ಕೋರಿದ್ದಾರೆ.
ಕಾನ್ಪುರ(ನ.27): ಟೀಂ ಇಂಡಿಯಾ ಬ್ಯಾಟ್ಸ್‌ಮನ್ ಸುರೇಶ್ ರೈನಾಗೆ ಹುಟ್ಟು ಹಬ್ಬದ ಸಂಭ್ರಮ. 32ನೇ ವಸಂತಕ್ಕೆ ಕಾಲಿಟ್ಟಿರುವ ರೈನಾ ಸದ್ಯ ಉತ್ತರ ಪ್ರದೇಶದ ರಣಜಿ ತಂಡದ ಜೊತೆ ಹುಟ್ಟು ಹಬ್ಬ ಆಚರಿಸಿಕೊಂಡಿದ್ದಾರೆ.
ಸದ್ಯ ಟೀಂ ಇಂಡಿಯಾದಿಂದ ಹೊರಗುಳಿದಿರುವ ಸುರೇಶ್ ರೈನಾ ಕಮ್‌ಬ್ಯಾಕ್‌ಗಾಗಿ ಕಸರತ್ತು ನಡೆಸುತ್ತಿದ್ದಾರೆ. ಟೀಂ ಇಂಡಿಯಾದ ಮಧ್ಯಮ ಕ್ರಮಾಂಕದಲ್ಲಿ ಅದ್ಬುತ ಪ್ರದರ್ಶನ ನೀಡಿದ್ದ ರೈನಾ, 226 ಏಕದಿನ ಪಂದ್ಯದಿಂದ 5615 ರನ್ ಸಿಡಿಸಿದ್ದಾರೆ. 78 ಟಿ20 ಪಂದ್ಯದ ಮೂಲಕ 1605 ರನ್ ಪೇರಿಸಿದ್ದಾರೆ. ಆದರೆ ಟೆಸ್ಟ್ ಕ್ರಿಕೆಟ್‌ನಲ್ಲಿ ಹಿನ್ನಡೆ ಅನುಭವಿಸಿರುವ ರೈನಾ, 18 ಪಂದ್ಯಗಳಿಂದ 768 ರನ್ ದಾಖಲಿಸಿದ್ದಾರೆ.
ಐಪಿಎಲ್ ಟೂರ್ನಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಪರ ಅದ್ಬುತ ಪ್ರದರ್ಶನ ನೀಡಿರುವ ರೈನಾ, ಗುಜರಾತ್ ಲಯನ್ಸ್ ತಂಡದಲ್ಲಿ ನಾಯಕನಾಗಿಯೂ ಜವಾಬ್ದಾರಿ ನಿರ್ವಹಿಸಿದ್ದರು. ಹುಟ್ಟು ಹಬ್ಬ ಆಚರಿಸಿಕೊಳ್ಳುತ್ತಿರುವ ರೈನಾಗೆ ಟೀಂ ಇಂಡಿಯಾ ಕ್ರಿಕೆಟಿಗರು ಶುಭಾಶಯ ಕೋರಿದ್ದಾರೆ.
